ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಬೇಸತ್ತು ಕಳೆದ ಕೆಲವು ದಿನಗಳ ಹಿಂದೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆದಿದ್ದವು. ಇದರಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಕಿರುಕುಳ ನೀಡುವುದನ್ನು ತಪ್ಪಿಸುವುದಕ್ಕಾಗಿ ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಸುಗ್ರೀವಾಜ್ಞೆಯ (ಮೈಕ್ರೋ ಫೈನಾನ್ಸ್) ಸಾಂವಿಧಾನಿಕ ಸಿಂಧುತ್ವವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಹೌದು ರಾಜ್ಯ ಸರ್ಕಾರ ಜಾರಿ ಮಾಡಿದ ಸುಗ್ರೀವಾಜ್ಞೆಯ ಸಿಂಧುತ್ವ ಮತ್ತು ಮೋಟಾರು ವಾಹನ/ಆಸ್ತಿ ಹಣಕಾಸು ಉದ್ಯಮವು ಸುಗ್ರೀವಾಜ್ಞೆಯಿಂದ ಹೊರಗಿವೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಲು ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಕರ್ನಾಟಕ ಹೈರ್ ಪರ್ಚೇಸ್ ಅಸೋಶಿಯೇಶನ್ ಅರ್ಜಿ ಸಲ್ಲಿಸಿತ್ತು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಅರ್ಜಿ ವಜಾಗೊಳಿಸಿ, ಸುಗ್ರೀವಾಜ್ಞೆಯನ್ನು ಎತ್ತಿಹಿಡಿದು ಆದೇಶಿಸಿದೆ.