ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಮಾವಿನ ಹಣ್ಣಿನ ಸೀಸನ್ ನಲ್ಲಿ ಜನರು ಮಾವಿನ ಹಣ್ಣು ಖರೀದಿಗೆ ಅಷ್ಟು ಆಸಕ್ತಿ ತೋರಿಲ್ಲ. ಹಾಗಾಗಿ ರಾಜ್ಯದಲ್ಲಿ ಮಾವಿನ ಹಣ್ಣಿನ ದರ ತೀವ್ರ ಕುಸಿತ ಕಂಡಿದೆ. ಇದರಿಂದ ರಾಜ್ಯದ ಮಾವು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ HD ದೇವೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಹೌದು ಮಾವು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಸಚಿವ ಚೌಹಾಣ್ಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಪತ್ರ ಬರೆದಿದ್ದಾರೆ.ರಾಜ್ಯದಲ್ಲಿ ಮಾವಿನ ದರ ಕುಸಿತದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಮಾವು ಬೆಳೆಗಾರರ ಸಮಸ್ಯೆ ಬಗೆಹರಿಸಬೇಕು ಎಂದು ಎಚ್ ಡಿ ದೇವೇಗೌಡ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.