ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಸೆಕೆ ಜೊತೆಗೆ ಬಿಸಿಗಾಳಿ ಬೀಸುತ್ತಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಕೆಲ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ಸಲಹೆ ಮಾಡಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು, ಬಿಸಿಯಾದ ಗಾಳಿ, ಶಾಖ ತರಂಗದ ಸಮಯದಲ್ಲಿ ಈ ಕೆಳಕಂಡ ಸಲಹೆಯನ್ನು ಪಾಲಿಸುವಂತೆ ತಿಳಿಸಿದೆ.
ಹೆಚ್ಚು ನೀರು ಕುಡಿಯುವುದು:
- ಸಾರ್ವಜನಿಕರಿಗೆ For general population
- ಬಾಯಾರಿಕೆ ಇಲ್ಲದಿದ್ದರೂ ಸಹ ಹೆಚ್ಚು ನೀರನ್ನು ಆಗಾಗ್ಗೆ ಸೇವಿಸಬೇಕು. ಬಾಯಾರಿಕೆಯು ನಿರ್ಜಲೀಕರಣದ ಲಕ್ಷಣವಾಗಿದೆ.
- ಪ್ರಯಾಣ ಮಾಡುವ ಸಮಯದಲ್ಲೂ ಕುಡಿಯಲು ನೀರನ್ನು ಜೊತೆಗೆ ತೆಗೆದುಕೊಂಡು ಹೋಗುವುದು ಅಗತ್ಯವಾಗಿದೆ. ಮೌಖಿಕ ಮನರ್ಜಲೀಕರಣ ದ್ರಾವಣ (Oral Rehydration Solution – ORS). ಹಾಗೂ ಮನೆಯಲ್ಲಿಯೇ ಸಿದ್ಧಪಡಿಸಿದ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ/ಲಸ್ಸಿ, ಹಣ್ಣಿನ ಜ್ಯೂಸ್ ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
- ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳೆನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
ಶರೀರವನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು:
- ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
- • ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ, ಬಿಸಿಲನಿಂದ ರಕ್ಷಣೆ ಪಡೆಯುವುದು ಉತ್ತಮ.
- ಬಿಸಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
ಸದಾ ಎಚ್ಚರದಿಂದಿರಿ:
- ರೇಡಿಯೋ, ದೂರದರ್ಶನ ಹಾಗೂ ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನದ ಮಾಹಿತಿಯನ್ನು ಪಡೆದು ಅದರಂತೆ ಚಟುವಟಿಕೆಗಳನ್ನು ಯೋಜಿಸುವುದು ಉತ್ತಮ. ಹವಾಮಾನದ ಕುರಿತು ಕಾಲಕಾಲಕ್ಕೆ ಮಾಹಿತಿಯನ್ನು Karnataka State Natural Disaster Monitoring Centre ನ https://www.ksndinc.org/default.aspx ದಲ್ಲಿ ಮಾಹಿತಿಯನ್ನು ಪಡೆಯಬಹುದು.
ಸಾಧ್ಯವಾದಷ್ಟು ಒಳಾಂಗಣದಲ್ಲಿರಿ:
- ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ.
- ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು, ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿಡಿ, ಹಾಗೂ ತಣ್ಣನೆಯ ಗಾಳಿಯ ಸಂಚಾರಕ್ಕೆ ಅನುಕೂಲವಾಗುವಂತೆ, ರಾತ್ರಿಯ ಹೊತ್ತು ಕಿಟಕಿಗಳನ್ನು ತೆರೆಡಿಡಬೇಕು.
ಹೊರಾಂಗಣ ಚಟುವಟಿಕೆಗಳ ಸಂದರ್ಭದಲ್ಲಿ:
- ಹೊರಾಂಗಣ ಚಟುವಟಿಕೆಗಳನ್ನು ಆದಷ್ಟೂ ದಿನದ ತಣ್ಣನೆಯ ಸಮಯದಲ್ಲಿ, ಅಂದರೆ ಬೆಳಗಿನ ಹೊತ್ತು ಅಥವಾ ಸಂಜೆಗೆ ಸೀಮಿತವಿರುವಂತೆ ಬದಲಾಯಿಸಿಕೊಳ್ಳಿ. ಹೊರಾಂಗಣ ಪ್ರದೇಶಗಳಲ್ಲಿ ಆಯೋಜಿಸಲಾಗುವ ಚಟುವಟಿಕೆಗಳು ಪೂರ್ವಾಹ 11 ಗಂಟೆಯ ಒಳಗೆ ಮುಕ್ತಾಯಗೊಳಿಸುವುದು ಉತ್ತಮ.
- ಪೂರ್ವಾಹ್ನ 11 ಗಂಟೆಯಿಂದ ಸಂಜೆ 4 ಗಂಟೆಯ ಅವಧಿಯಲ್ಲಿ ಹೊರಾಂಗಣ ಸಭೆಗಳು / ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ:
- > ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆಯನ್ನು ನೀಡಲು ಅಗತ್ಯ ಶಾಮಿಯಾನ/ಪೆಂಡಾಲ್‌ನ ವ್ಯವಸ್ಥೆ ಮಾಡುವುದು.
> ಉತ್ತಮ ಗಾಳಿಯ (Air circulation) ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳುವುದು.
> ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡುವುದು.
ದುರ್ಬಲ ವ್ಯಕ್ತಿಗಳಿಗೆ
ಬಿಸಿ ಗಾಳಿಯ ಒತ್ತಡ ಹಾಗೂ ಬಿಸಿ ಗಾಳಗೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳಿಂದ ಎಲ್ಲರಿಗೂ ಅಪಾಯವಿದೆ. ಆದರೆ ಈ ಕೆಳಕಾಣಿಸಿದ ಗುಂಪಿನ ಜನರಿಗೆ ಹೆಚ್ಚು ಅಪಾಯವಿರುವ ಹಿನ್ನೆಯಲ್ಲಿ ಹೆಚ್ಚುವರಿ ಗಮನವನ್ನು ನೀಡುವುದು ಅಗತ್ಯವಾಗಿದೆ.
- ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು
- ಗರ್ಭಿಣಿಯರು
- ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು
- ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು
- ಆರೋಗ್ಯ ಸಮಸ್ಯೆಗಳರುವವರು, ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು.
ತಂಪಾದ ವಾತಾವರಣವಿರುವ ಪ್ರದೇಶದಿಂದ ಬಿಸಿಯಾದ ವಾತಾವರಣದ ಪ್ರದೇಶಕ್ಕೆ ಭೇಟಿ ನೀಡುವ ಜನರು: ಬಿಸಿ ಗಾಳಿಯ
ಸಂದರ್ಭದಲ್ಲಿ ಸುಮಾರು ಒಂದು ವಾರದ ಅವಧಿಯನ್ನು ಹೊಸ ವಾತಾವರಣಕ್ಕೆ ಒಗ್ಗಿಕೊಳ್ಳಲು (acclimatized) ಮೀಸುಡಬೇಕು ಹಾಗೂ ಈ ಅವಧಿಯಲ್ಲಿ ಹೆಚ್ಚು ನೀರನ್ನು ಸೇವಿಸಬೇಕು. ಹಂತ ಹಂತವಾಗಿ ಬಿಸಿಯಾದ ವಾತಾವರಣದಲ್ಲಿ ಚಟುವಟಿಕೆಗಳನ್ನು ನಡೆಸುವುದರಿಂದ ಒಗ್ಗಿಕೊಳ್ಳಲು ಸಾಧ್ಯವಾಗುತ್ತದೆ.
ಇತರ ಮುನ್ನೆಚ್ಚರಿಕಾ ಕ್ರಮಗಳು
- ಪ್ರತ್ಯೇಕವಾಗಿ / ಒಂಟಿಯಾಗಿ ವಾಸಿಸುವ ವೃದ್ಧರು ಅಥವಾ ರೋಗಿಗಳ ಉಸ್ತುವಾರಿ ಹಾಗೂ ಅವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ದೈನಂದಿನವಾಗಿ ಕೈಗೊಳ್ಳಬೇಕು.
- ಮನೆಯ ಒಳಾಂಗಣವನ್ನು ತಣ್ಣಗಿರಿಸಲು ಪರದೆಗಳು / ಷಟರ್ ಗಳನ್ನು ಬಳಸಿ ಹಾಗೂ ರಾತ್ರಿಯ ಸಮಯದಲ್ಲಿ ಕಿಟಕಿಗಳನ್ನು ತೆರೆದಿಡಿ.
ಹಗಲು ಹೊತ್ತಿನಲ್ಲಿ ಮನೆಯ ಕೆಳಗಿನ ಮಹಡಿಗಳಲ್ಲಿರುವುದು ಉತ್ತಮ. - ಶರೀರವನ್ನು ತಣ್ಣಗಿಡಲು ಫ್ಯಾನ್ ಅಥವಾ ತೇವವಾದ ಬಟ್ಟೆಯನ್ನು ಬಳಸಬಹುದು.