ಚಿಕ್ಕಮಗಳೂರು : ಹುಟ್ಟಿದ ಎರಡೇ ದಿನಕ್ಕೆ ಮಗುವೊಂದು ತಾಯಿಗೆ ಬೇಡವಾಗಿದ್ದು, ಪಾಪಿ ತಾಯಿಯೊಬ್ಬಳು ತನ್ನ ಎರಡು ದಿನದ ಪುಟ್ಟ ಕಂದಮ್ಮನನ್ನು ಕಾಫಿ ತೋಟದಲ್ಲಿ ಬಿಟ್ಟು ಹೋಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ.
ಹೌದು ಚಂದ್ರಮ್ಮ ಎಂಬುವರ ಮನೆಯ ಪಕ್ಕದಲ್ಲಿರುವ ಕಾಫಿ ತೋಟದಲ್ಲಿ ಹುಟ್ಟಿದ ಎರಡೇ ದಿನಕ್ಕೆ ಪುಟ್ಟ ಕಂದಮ್ಮನನ್ನು ಹೆತ್ತ ತಾಯಿಯೇ ಬಿಟ್ಟು ಹೋಗಿದ್ದು, ಗುರುವಾರ ಬೆಳಗ್ಗಿನ ಜಾವ 6 ಗಂಟೆಯ ಸಮಯದಲ್ಲಿ ಮಗು ಅಳುವ ಸದ್ದು ಕೇಳಿಸಿದೆ.
ಸುಮಾರು ಗಂಟೆಗಳವರೆಗೂ ಮಗು ಅಳುತ್ತಿರುವುದು ಕೇಳಿಸಿದೆ. ಈ ವೇಳೆ ಚಂದ್ರಮ್ಮ ತಮ್ಮ ಮಗಳೊಂದಿಗೆ ಸ್ಥಳಕ್ಕೆ ಬಂದು ನೋಡಿದಾಗ ತಾಯಿಯೊಬ್ಬಳು ಎರಡು ದಿನದ ಹಸುಗೂಸನ್ನು ಕಾಫಿ ತೋಟದಲ್ಲಿ ಬಿಟ್ಟಿರುವುದು ಬೆಳಕಿಗೆ ಬಂದಿದೆ.
ಮಗುವನ್ನು ಕರೆತಂದು ತಮ್ಮ ಮನೆಯಲ್ಲಿ ಹಾಲು ಕುಡಿಸಿ ಆರೈಕೆ ಮಾಡಿದ್ದಾರೆ. ನಂತರ ಗ್ರಾಮದ ಆಯಾಗೆ ವಿಷಯ ತಿಳಿಸಿ ಸ್ಥಳಕ್ಕೆ ಡಾಕ್ಟರನ್ನು ಕರೆಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ.ಸ್ಥಳಕ್ಕೆ ಬಂದ ಅಧಿಕಾರಿಗಳು ಮಗುವನ್ನು ತಮ್ಮ ಜೊತೆ ಕರೆದುಕೊಂಡು ಹೋಗಿದ್ದಾರೆ.