ಬೆಂಗಳೂರು : ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಶಾಕ್ ನೀಡಿದ್ದು, ಮಾರ್ಚ್ ನಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗಲಿದೆ ಎಂದು ತಿಳಿಸಿದೆ.
ಈ ಕುರಿತು ಹವಾಮಾನ ತಜ್ಞರು ಮಾಹಿತಿ ನೀಡಿದ್ದು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದ್ದು, ಈಗಾಗಲೇ ಗರಿಷ್ಠ ಉಷ್ಣಾಂಶ ಬೆಂಗಳೂರಿನಲ್ಲಿ 32 ಡಿ.ಸೆ. ದಾಟಿದೆ. ಅದರಲ್ಲೂ ಮಾರ್ಚ್ ನಿಂದ ಬೇಸಿಗೆ ಆರಂಭಗೊಳ್ಳಲಿದ್ದು ಆಗ ಬಿಸಿಲ ಗರಿಷ್ಠ ಉಷ್ಣಾಂಶ ಇನ್ನಷ್ಟು ಏರಿಕೆ ದಾಖಲಾಗಲಿದೆ ಎಂದು ತಿಳಿಸಿದ್ದಾರೆ.
ರಾಝ್ಯದಲ್ಲಿ ಈ ಬಾರಿ ಮಳೆ, ಅದೇ ರೀತಿ ಚಳ ಪ್ರಮಾಣವೂ ಹೆಚ್ಚಾಗಿತ್ತು. ಇನ್ನು ಬೇಸಿಗೆಯ ಬಿಸಿಲು, ಸೆಕೆಯೂ ಅಧಿಕವಾಗಿರಲಿದೆ. ಈಗಾಗಲೇ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಹಾಗೂ ಕನಿಷ್ಠ ಉಷ್ಣಾಂಶ ಹೆಚ್ಚಾಗಿದೆ. ಕಳೆದ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆ ಕನಿಷ್ಠ ಉಷ್ಣಾಂಶ ವಾಡಿಕೆ ಪ್ರಮಾಣಕ್ಕಿಂತ 2 ರಿಂದ 4 ಡಿ.ಸೆ. ವರೆಗೆ ಕಡಿಮೆ ದಾಖಲಾಗಿದೆ. ದಕ್ಷಿಣ ಒಳನಾಡು, ಕರಾವಳಿಯ ಕೆಲ ಭಾಗದಲ್ಲಿ ಗರಿಷ್ಠ ಉಷ್ಣಾಂಶದಲ್ಲಿ 1ರಿಂದ 3 ಡಿ.ಸಿ.ವರೆಗೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.