ಚಿತ್ರದುರ್ಗ : ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಶುರುವಾಗಿದ್ದು, ಬಿರು ಬೇಸಿಗೆಯಿಂದ ಬಸವಳಿದಿದ್ದ ಜನತೆಗೆ ವರುಣ ತಂಪೆರಿದಿದ್ದಾನೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಹವಮಾನ ಇಲಾಖೆಯು ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಚಿತ್ರದುರ್ಗದಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಆಗುತ್ತಿದೆ.
ಹೌದು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಆಗುತ್ತಿದೆ. ಬಿಸಿಲ ಬೆಗೆಯಿಂದ ಬಸವಳಿದಿದ್ದ ಜನರಿಗೆ ಇದೀಗ ವರುಣ ತಂಪೆರೆದಿದ್ದಾನೆ. ಮಳೆ ಆಗಮನದಿಂದ ಬಯಲು ಸೀಮೆಯ ಜನರಲ್ಲಿ ಇದೀಗ ಸಂತಸ ಮೂಡಿದೆ.








