ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ನಿನ್ನೆ ಸುರಿದ ಭಾರಿ ಮಳೆಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಆರ್ಸಿಬಿ ಮತ್ತು ಕೆಕೆಆರ್ ಪಂದ್ಯ ಕೂಡ ರದ್ದಾಗಿದೆ. ಇದೀಗ ಇಂದು ಮತ್ತೆ ಬೆಂಗಳೂರು ನಗರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.
ಹೌದು ಇಂದು ಸಹ ಬೆಂಗಳೂರು ನಗರದ ಹಲವಡೆ ಧಾರಾಕಾರ ಮಳೆ ಶುರುವಾಗಿದೆ. ಬೆಂಗಳೂರಿನ ಶಾಂತಿನಗರ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್ ವೃತ್ತ, ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ಜಯನಗರ, ಚಾಮರಾಜಪೇಟೆ, ವಿಜಯನಗರ, ಚಂದ್ರಾಲೇಔಟ್ ರಾಜಾಜಿನಗರ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆ, ನಾಗರಬಾವಿ, ಆರ್ ಆರ್ ನಗರ, ನಾಯಂಡಹಳ್ಳಿ, ಬಿಟಿಎಂ ಲೇಔಟ್, ಯಶವಂತಪುರ, ಪೀಣ್ಯ, ಮೈಕೋಲೇಔಟ್ ಹಾಗು ಬೊಮ್ಮನಹಳ್ಳಿ ಸೇರಿದಂತೆ ಹಲವಡೆ ಭಾರಿ ಮಳೆ ಆಗುತ್ತಿದೆ. ಇನ್ನು ಭಾರಿ ಮಳೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ರಸ್ತೆಯಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ.