ಹಾಸನ : ರಾಜಧಾನಿ ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಇದೀಗ ಚಿಕ್ಕಮಗಳೂರಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಭಾರಿ ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೇಮಾವತಿ ನದಿಗೆ ಉರುಳಿ ಬಿದ್ದಿದೆ.
ಹೌದು ಚಕಮಕ್ಕಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಈ ಒಂದು ದುರಂತ ಸಂಭವಿಸಿದೆ. 1 ಗಂಟೆಯ ಅಂತರದಲ್ಲಿ ನಿಯಂತ್ರಣ ತಪ್ಪಿ 2 ವಾಹನಗಳು ಪಲ್ಟಿಯಾಗಿವೆ. ಘಟನೆಯಲ್ಲಿ ಅದೃಷ್ಟವಶಾತ್ ನಾಲ್ವರು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸ್ಥಳೀಯರು ಹಗ್ಗ ಕಟ್ಟಿ ನದಿಗೆ ಇಳಿದು ಕಾರಿನಲ್ಲಿ ಇದ್ದವರನ್ನು ರಕ್ಷಿಸಿದ್ದಾರೆ.