ಚಿಕ್ಕಮಗಳೂರು : ಮಲ್ನಾಡು ಭಾಗಗಳಲ್ಲಿ ಇದೀಗ ಭಾರಿ ಮಳೆ ಆಗುತ್ತಿದ್ದು ಈಗಾಗಲೇ ಹಾಸನ ಉತ್ತರ ಕನ್ನಡ ಹಾಗೂ ಬೆಳಗಾವಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿದ್ದು ಮಳೆಯಿಂದಾಗಿ ಗುಡ್ಡ ಕುಸಿದು ರಸ್ತೆ ಸಂಚಾರ ಬಂದಾಗಿದೆ.
ಹೌದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ತೀರ್ಥ ಕೆರೆ ಬಳಿ ಈ ಒಂದು ಗುಡ್ಡ ಕುಸಿದಿರುವ ಘಟನೆ ನಡೆದಿದೆ.ಗುಡ್ಡ ಕುಸಿತದಿಂದ ಶೃಂಗೇರಿ ಮತ್ತು ಹೊರನಾಡು ಸಂಪರ್ಕಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ರಸ್ತೆಯಲ್ಲಿ ಮಣ್ಣು ಬಿದ್ದ ಹಿನ್ನೆಲೆ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.ಪೊಲೀಸರು ಬ್ಯಾರಿಕೆಡ್ ಹಾಕಿ ರಸ್ತೆಯನ್ನು ಬಂದ್ ಮಾಡಿದ್ದಾರೆ. ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.