ದಕ್ಷಿಣಕನ್ನಡ : ಈಗಾಗಲೇ ರಾಜ್ಯದಲ್ಲಿ ಬೆಂಗಳೂರು ಮಹಾನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಭಾರಿ ಮಳೆ ಆಗುತ್ತಿದೆ ಧಾರಾಕಾರ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು ಹಲವರು ಮಹಾಮಳೆಗೆ ಬಲಿಯಾಗಿದ್ದಾರೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಾಳೆ ಮತ್ತು ನಾಡಿದ್ದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹೌದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಾಳೆ ನಾಡಿದ್ದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.