ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೌದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಗುಡ್ಡ ಕುಸಿತದಿಂದ ಒಂದೇ ಕುಟುಂಬದ ಮೂವರು ಸಾವನಪ್ಪಿದ್ದಾರೆ. ಅಲ್ಲದೆ ಬಾರಿ ಮಳೆ ಆಗುತ್ತಿರುವುದರಿಂದ ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ನಾಳೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಗುಡ್ಡ ಕುಸಿತವಾಗುವ ಸ್ಥಳದಲ್ಲಿ ಎಚ್ಚರಿಕೆಯಿಂದ ಇರಿ. ಸ್ಥಳೀಯರು, ಪ್ರವಾಸಿಗರು ಸಮುದ್ರ ತೀರಕ್ಕೆ ತೆರಳಬೇಡಿ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ಹಾಗಾಗಿ ಆದಷ್ಟು ಜನರು ಗುಡ್ಡ ಕುಸಿತ ವಾಗುವ ಪ್ರದೇಶಗಳಿಂದ ದೂರವಿದ್ದು, ಪ್ರವಾಸಿಗರು ಸಮುದ್ರಕ್ಕೆ ತೆರಳದೆ ತಮ್ಮ ಎಚ್ಚರಿಕೆಯಲ್ಲಿ ಇರಬೇಕು ಎಂದು ಸೂಚಿಸಿದೆ.