ಬೆಂಗಳೂರು : ಇಂದು ಬೆಂಗಳೂರು ನಗರದ ಹಲವಡೆ ಧಾರಾಕಾರ ಮಳೆ ಆಗುತ್ತಿದೆ. ಬೆಂಗಳೂರಿನ ವಿಧಾನಸೌಧ, ಮೆಜೆಸ್ಟಿಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಧಾರಾಕಾರ ಮಳೆಗೆ ವಾಹನ ಸವಾರರು ಪರದಾಟ ನಡೆಸಿದರು.
ಬೆಂಗಳೂರಿನ ಮೆಜೆಸ್ಟಿಕ್, ವಿಧಾನಸೌಧ, ಕೆ.ಆರ್ ಸರ್ಕಲ್, ಟೌನ್ ಹಾಲ್, ಮೈಸೂರು ಬ್ಯಾಂಕ್ ವೃತ್ತ, ಕಾರ್ಪೊರೇಷನ್, ಶಾಂತಿನಗರ, ರಿಚ್ಮಂಡ್ ಟೌನ್, ಜಯನಗರ, ಸೇರಿದಂತೆ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.
ಇದೇ ವೇಳೆ ವಿಧಾನಸೌಧದ ಬಳಿ ಪೆಂಡಾಲ್ ಕೆಳಗೆ ಜನರು ಆಶ್ರಯ ಪಡೆದರು. ಇಂದು ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಹಿನ್ನೆಲೆಯಲ್ಲಿ ಪೆಂಡಾಲ್ ಹಾಕಲಾಗಿತ್ತು. ಆ ಒಂದು ಪೆಂಡಾಲ್ ಆಶ್ರಯ ಪಡೆದರು.