Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೊಪ್ಪಳ : ಜಾತಿ ನಿಂದನೆ, ಫೋಟೋ ವಾಟ್ಸಾಪ್ ಸ್ಟೇಟಸ್ ಗೆ ಹಾಕೋದಾಗಿ ಬೆದರಿಕೆ : ಡೆತ್ ನೋಟ್ ಬರೆದಿಟ್ಟು ಮಹಿಳೆ ಸೂಸೈಡ್

05/09/2025 7:19 AM

BREAKING : ಮಂಡ್ಯದಲ್ಲಿ ದಾರುಣ ಘಟನೆ : ಎಮ್ಮೆ ತೊಳೆಯುವ ವೇಳೆ ಬಾವಿಗೆ ಬಿದ್ದು ದಂಪತಿ ದುರಂತ ಸಾವು!

05/09/2025 7:18 AM

ಕ್ರೀಡೆಯಷ್ಟೇ ಅಲ್ಲ, ಮಾನವೀಯತೆಯಲ್ಲೂ ಮುಂದೆ: ಪಂಜಾಬ್ ಕಿಂಗ್ಸ್‌ನಿಂದ ಪ್ರವಾಹ ಪರಿಹಾರಕ್ಕೆ ₹33.8 ಲಕ್ಷ ದೇಣಿಗೆ

05/09/2025 7:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಇಲ್ಲಿವೆ
KARNATAKA

BIG NEWS : ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಇಲ್ಲಿವೆ

By kannadanewsnow0505/09/2025 5:16 AM

ಬೆಂಗಳೂರು : ನಿನ್ನೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ನಡೆಯಿತು. ಈ ಒಂದು ಸಂಪುಟ ಸಭೆಯಲ್ಲಿ ಹಲವು ನಿರ್ಣಾಯಗಳನ್ನ ತೆಗೆದುಕೊಳ್ಳಲಾಯಿತು. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಇಲ್ಲಿವೆ

1. ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆಯ ವಿಮಾದಾರರಿಗೆದಿನಾಂಕ: 01.04.2020 ರಿಂದ 31.03.2022ರ ದ್ವೆöÊವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/- ರಂತೆ ಲಾಭಾಂಶ (ಬೋನಸ್) ಘೋಷಿಸಲು ಮತ್ತು ಅವಧಿ ಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ ದಿನಾಂಕ: 01.04.2022 ರಿಂದ 31.03.2024ರ ಅವಧಿಯಲ್ಲಿ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/- ರಂತೆ ಮಧ್ಯಂತರ ಲಾಭಾಂಶವನ್ನು (ಇಂಟರೀಮ್ ಬೋನಸ್) ಘೋಷಿಸಲು ಸಚಿವ ಸಂಪುಟ ನಿರ್ಧರಿಸಿದೆ.

2. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ “ಆಶಾಕಿರಣ” ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೂ.52.85 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ಸಚಿವ ಸಂಪುಟ ನೀಡಿದೆ.

3. ಒಳಾಡಳಿತ ಇಲಾಖೆಯಡಿ “ಕರ್ನಾಟಕ ಇ-ಸಾಕ್ಷö್ಯ ನಿರ್ವಹಣಾ ನಿಯಮಗಳು, 2025”ಕ್ಕೆ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

4. “ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲು ಮೊದಲನೇ ಹಂತದಲ್ಲಿ ಕರ್ನಾಟಕ ಗೃಹ ಮಂಡಳಿಯಿAದ ರೂ.65.00 ಕೋಟಿಗಳ ವೆಚ್ಚದಲ್ಲಿ ಜಮೀನು ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

5. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ತರಗತಿ 1 ರಿಂದ 10 ವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್, ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆ ಈ ಸಂಸ್ಥೆಯ ವತಿಯಿಂದ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿರುವ ಕಾರ್ಯಕ್ರಮವನ್ನು ವಾರದ ಮೂರು ದಿನಗಳ ಬದಲಾಗಿ ಐದು ದಿನಗಳಿಗೆ ವಿಸ್ತರಿಸಿ, ಸದರಿ ಯೋಜನೆಯ ಶೇಕಡಾ 25 ರಷ್ಟು ವೆಚ್ಚವನ್ನು ಅಂದರೆ ರೂ.27.02 ಕೋಟಿಗಳನ್ನು (ಸಾಗಾಣಿಕಾ ವೆಚ್ಚ ರೂ.6.49 ಕೋಟಿಗಳು ಸೇರಿ) ರಾಜ್ಯ ಸರ್ಕಾರದಿಂದ ಭರಿಸಲು ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.

6. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಬೆಂಗಳೂರು ನಗರದ ವಿವಿಧ ಸ್ಥಳಗಳಲ್ಲಿ ಹೊಸದಾಗಿ 06 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ನಿರ್ಮಾಣ ಕಾಮಗಾರಿ ಹಾಗೂ 07 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆ (O&M) ಯ ರೂ.956.67 ಕೋಟಿಗಳ ಅಂದಾಜು ಮೊತ್ತದ ಯೋಜನೆಗೆ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.

7. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಕೆಂಗೇರಿಯ 60 ಎಂ.ಎಲ್.ಡಿ ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಣಾ ಘಟಕವನ್ನು 80 ಎಂ.ಎಲ್.ಡಿ ಸಾಮರ್ಥ್ಯಕ್ಕೆ ಉನ್ನತೀಕರಿಸಲು ಎಲೆಕ್ಟೊçÃಮೆಕಾನಿಕಲ್ ಉಪಕರಣಗಳನ್ನು ರೂ.28.88 ಕೋಟಿಗಳ ಅಂದಾಜು ಮೊತ್ತದಲ್ಲಿ ಅಳವಡಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಧರಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಯಳಗೊಂಡನಹಳ್ಳಿ, ಕುರುಬರಹಳ್ಳಿ, ಅಣ್ಣಿಗೆರೆ ಮತ್ತು ವೈ.ಮಲ್ಲಾಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ಶಾಖಾ ಕಾಲುವೆಯ ಕಾಮಗಾರಿಗಳಿಗೆ ಅಗತ್ಯವಿರುವ ಸುಮಾರು 221 ಎಕರೆ 01.12 ಗುಂಟೆ ಜಮೀನನ್ನು ರೂ.77.35 ಕೋಟಿಗಳ ಮೊತ್ತದಲ್ಲಿ ನೇರ ಖರೀದಿಯ ಮೂಲಕ ಸ್ವಾಧೀನಪಡಿಸಿಕೊಳ್ಳಲು ಸಚಿವ ಸಂಪುಟ ನಿರ್ಣಯಿಸಿದೆ.

8. ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ 107 ಕೆರೆಗಳಿಗೆ ಬೇಡ್ತಿ ನದಿಯಿಂದ ನೀರನ್ನು ಎತ್ತಿ ತುಂಬಿಸುವ ಯೋಜನೆಯನ್ನು ರೂ.179.50 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಧರಿಸಿದೆ.

9. ನಗರಾಭಿವೃದ್ಧಿ ಇಲಾಖೆ (ಬಿಬಿಎಂಪಿ)ಯಡಿ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ರ ಜೆ.ಪಿ ನಗರ 4ನೇ ಹಂತದಿAದ ಹೆಬ್ಬಾಳದವರೆಗೆ (ಓಆರ್ಆರ್ ಪಶ್ಚಿಮ) ಹಾಗೂ ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆವರೆಗೆ ಎರಡು ಕಾರಿಡಾರ್ಗಳಲ್ಲಿ 37.121 ಕಿ.ಮೀ.ಗಳ ಉದ್ದದ ಡಬಲ್ ಡೆಕ್ಕರ್ ನಿರ್ಮಾಣದಲ್ಲಿ, ಮೆಟ್ರೋ ವಯಾಡಕ್ಟ್ ಜೊತೆಗೆ ಎಲಿವೇಟೆಡ್ ರಸ್ತೆಯನ್ನು ರೂ.9700.00 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಾಣ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರವು 2025-26 ನೇ ಸಾಲಿನ ಬಜೆಟ್ನಲ್ಲಿ ಒದಗಿಸಲಾದ ರೂ. 4000.00 ಕೋಟಿಗಳ ಬಜೆಟ್ ಅನುದಾನದ ಮೂಲಕ ಯೋಜನೆಯ ಸಂಪೂರ್ಣ ವೆಚ್ಚವನ್ನು ಭರಿಸುತ್ತದೆ ಮತ್ತು ಭವಿಷ್ಯದಲ್ಲಿ ಇದೇ ರೀತಿಯ ಅನುದಾನಗಳನ್ನು ನಿರೀಕ್ಷಿಸಲಾಗುತ್ತದೆ.

10. ವಿಜಯಪುರ ಜಿಲ್ಲೆಯ ಸಿಂಧಗಿ ಪುರಸಭೆಯಿಂದ ನಗರಸಭೆಯನ್ನು ರಚಿಸಿ “ಸಿಂಧಗಿ ನಗರಸಭೆ” ಪ್ರದೇಶವೆಂದು ಉದ್ಘೋಷಿಸಲು” ಸಚಿವ ಸಂಪುಟ ನಿರ್ಣಯಿಸಿದೆ.

11. ಬೆಳಗಾವಿ ಜಿಲ್ಲೆಯ ಹಾಲಿ ಸವದತ್ತಿ ಯಲ್ಲಮ್ಮಾ ಪುರಸಭೆಯಿಂದ ನಗರಸಭೆಯನ್ನು ರಚಿಸಿ “ಸವದತ್ತಿ ಯಲ್ಲಮ್ಮ ನಗರಸಭೆ” ಪ್ರದೇಶವೆಂದು ಉದ್ಘೋಷಿಸಲು” ಸಚಿವ ಸಂಪುಟ ನಿರ್ಣಯಿಸಿದೆ.

12. ಬೀದರ್ ಜಿಲ್ಲೆಯ ಹಾಲಿ
ಹುಮನಾಬಾದ್ ಪುರಸಭೆಯಿಂದ ನಗರಸಭೆಯನ್ನು ರಚಿಸಿ “ಹುಮನಾಬಾದ್ ನಗರಸಭೆ” ಪ್ರದೇಶವೆಂದು ಉದ್ಘೋಷಿಸಲು” ಸಚಿವ ಸಂಪುಟ ನಿರ್ಣಯಿಸಿದೆ.

13. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ರಾಜ್ಯದ ವಿವಿಧ 22 ವಿಧಾನ ಸಭಾ ಕ್ಷೇತ್ರಗಳಲ್ಲಿ (40 ಕಾಮಗಾರಿಗಳು) (ಅನುಬಂಧದಲ್ಲಿರುವAತೆ) ಅಲ್ಪಸಂಖ್ಯಾತರು ವಾಸಿಸುತ್ತಿರುವ ನಗರ ಪ್ರದೇಶಗಳಲ್ಲಿನ ಅತೀ ಹಿಂದುಳಿದ ಕಾಲೋನಿಗಳನ್ನು ಮಾದರಿ ಕಾಲೋನಿಗಳನ್ನಾಗಿ ಅಭಿವೃದ್ಧಿಪಡಿಸಲು 2024-25 ನೇ ಸಾಲಿನಲ್ಲಿ ಬಿಡುಗಡೆ ಮಾಡಲಾದ ರೂ. 160.00 ಕೋಟಿಗಳನ್ನು ಒಳಗೊಂಡAತೆ ಒಟ್ಟು ರೂ. 398.00 ಕೋಟಿಗಳ ಅಂದಾಜು ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದ ಆಡಳಿತಾಥ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

14. ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) 2025 ಅನ್ನು ವಿಧಾನ ಮಂಡಲದ ಉಭಯಸದನಗಳಲ್ಲಿ ಮಂಡಿಸಿರುವ ಕ್ರಮಕ್ಕೆ” ಸಚಿವ ಸಂಪುಟ ಅನುಮೋದಿಸಿದೆ.

15. “ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿದೇಯಕ 2025 ಅನ್ನು ವಿಧಾನಸಭೆಯಲ್ಲಿ ಮಂಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಲು” ಸಚಿವ ಸಂಪುಟ ನಿರ್ಣಯಿಸಿದೆ.

16. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಅಡಿಯಲ್ಲಿರುವ ಜಿಲ್ಲಾ ಆಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅನುಸರಣೀಯ ಆಸ್ಪತ್ರೆ ನಿರ್ವಹಣಾ ವ್ಯವಸ್ಥೆ (ABDM – HMS) ತಂತ್ರಾAಶದ ಹಂತವಾರು ಅನುಷ್ಠಾನಕ್ಕಾಗಿ ತಾತ್ವಿಕ ಅನುಮೋದನೆ ಹಾಗೂ ವಿವಿಧ ಸೇವಾ ಪೂರೈಕೆದಾರರೊಂದಿಗೆ ಪ್ರತಿ ವಹಿವಾಟಿನ ಪಾವತಿ ಆಧಾರದ ಮೇಲೆ ಮೊದಲನೇ ಹಂತದ ಅನುಷ್ಟಾನಕ್ಕೆ (ವಾರ್ಷಿಕ ಅಂದಾಜು ವೆಚ್ಚ ರೂ.20.60 ಕೋಟಿಗಳು) ಆಡಳಿತಾತ್ಮಕ ಅನುಮೋದನೆ ನೀಡಲು ನಿರ್ಣಯಿಸಲಾಗಿದೆ.

17. ರಾಯಚೂರು ಜಿಲ್ಲೆಯ ಲಿಂಗಸೂಗೂರಿನಲ್ಲಿ 50 ಹಾಸಿಗೆಗಳ ಸಾಮರ್ಥ್ಯದ ತೀವ್ರ ನಿಗಾ ಘಟಕ ನಿರ್ಮಾಣ ಕಾಮಗಾರಿಯನ್ನು ರೂ.24.22 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

18. “ಭಾರತ ಸರ್ಕಾರದ CTRAV ಯೋಜನೆ, 2025 ಅಡಿಯಲ್ಲಿ (ಪ್ರತಿ ಫಲಾನುಭವಿಗೆ ರೂ.1.5 ಲಕ್ಷ ಸಹಾಯ), ರಾಜ್ಯ ಸರ್ಕಾರದಿಂದ ಹೆಚ್ಚುವರಿ (ಟಾಪ್-ಅಪ್) ರೂಪದಲ್ಲಿ ಪ್ರತಿ ಫಲಾನುಭವಿಗೆ ರೂ.1 ಲಕ್ಷ ನೆರವು ಒದಗಿಸುವ ಪ್ರಸ್ತಾವನೆ- ಇದಕ್ಕಾಗಿ ಈಗಿರುವ ರಾಜ್ಯ ಅಪಘಾತ ಪೀಡಿತರ ಯೋಜನೆಗೆ ತಿದ್ದುಪಡಿ ಮಾಡುವುದನ್ನು ಹಾಗೂ (ಪ್ಯಾರಾ 2 ಪ್ರಕಾರ) ಯಾವುದೇ ಹೆಚ್ಚುವರಿ ಆರ್ಥಿಕ ಹೊರೆಯಿಲ್ಲದ ಪ್ರಸ್ತಾವನೆಗೆ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಧರಿಸಿದೆ.

19. ಕರ್ನಾಟಕ ಗೃಹ ಮಂಡಳಿಯು ಬೆಂಗಳೂರು ಜಿಲ್ಲೆ, ಯಲಹಂಕ ತಾಲ್ಲೂಕು ಜಾಲ-1 ಹೋಬಳಿ, ಚಿಕ್ಕಜಾಲ ಹಾಗೂ ಮೀನುಕುಂಟೆ ಗ್ರಾಮದಲ್ಲಿ ಭೂಸ್ವಾಧೀನಪಡಿಸಿರುವ ಜಮೀನಿನಲ್ಲಿ ಶೇಕಡಾ 50:50ರ ಅನುಪಾತದ ಪಾಲುದಾರಿಕೆಯಡಿ ಭೂಮಾಲೀಕರಿಗೆ Developed Bulk Land ನೀಡಲು ಹಾಗೂ ಮಂಡಳಿಯ ಪಾಲಿನ ಜಮೀನಿನಲ್ಲಿ ಖಾಸಗಿ ಡೆವಲಪರ್ಸ್ಗಳಿಂದ ಜಂಟಿ ಸಹಭಾಗಿತ್ವದಡಿಯಲ್ಲಿ ಇಂಟಿಗ್ರೇಟೆಡ್ ಹೈಟೆಕ್ ಟೌನ್ಶಿಪ್ ಅನ್ನು ರೂ.2930.00 ಕೋಟಿಗಳ ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.

20. “ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜು ಮೊತ್ತ ರೂ.6334.01ಲಕ್ಷಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಹಾಗೂ ಹೆಚ್ಚುವರಿ ಮೊತ್ತ ರೂ.896.21 ಲಕ್ಷಗಳನ್ನು ಆಯವ್ಯಯದಲ್ಲಿ ಹಂಚಿಕೆ ಮಾಡಲಾದ ಮೊತ್ತದಲ್ಲಿ ಭರಿಸಲು” ಸಚಿವ ಸಂಪುಟ ನಿರ್ಣಯಿಸಿದೆ.

21. ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ರೂ.100 ಕೋಟಿಗಳ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿAದ (ಕೆಕೆಆರ್ಡಿಬಿ) ಹಾಗೂ ರಾಜ್ಯ ಸರ್ಕಾರದ ಅನುದಾನದೊಂದಿಗೆ ಆರಂಭಿಸುವ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ.

22. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ 20 ವಿದ್ಯಾರ್ಥಿ ನಿಲಯಗಳನ್ನು ರಾಜ್ಯದ 14 ಜಿಲ್ಲೆಗಳಲ್ಲಿ ರೂ.15.45 ಕೋಟಿಗಳ ಮೊತ್ತದಲ್ಲಿ ಹೊಸದಾಗಿ ಪ್ರಾರಂಭಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

23. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ರಾಯಚೂರು ಜಿಲ್ಲೆಯ ರಾಯಚೂರು ಗ್ರಾಮೀಣ ಮತ್ತು ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನಲ್ಲಿ ಹೊಸ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಕಟ್ಟಡ ನಿರ್ಮಾಣ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಒಟ್ಟು ರೂ.147.50 ಕೋಟಿಗಳ ಮೊತ್ತದಲ್ಲಿ (ಪ್ರತಿ ಕೇಂದ್ರಕ್ಕೆ ರೂ.73.75 ಕೋಟಿಗಳು) ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ಸಚಿವ ಸಂಪುಟ ನೀಡಿದೆ.

24. ಬೆಂಗಳೂರು ದಕ್ಷಿಣ ಜಿಲ್ಲೆ, ಮಾಗಡಿ ತಾಲ್ಲೂಕಿನ ಸೋಲೂರು ಹೋಬಳಿಯನ್ನು ಮಾಗಡಿ ತಾಲ್ಲೂಕಿನಿಂದ ಬೇರ್ಪಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿಗೆ ಸೇರ್ಪಡೆ ಮಾಡಲು ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ.

25. ರಾಜ್ಯ ಚುನಾವಣಾ ಆಯೋಗಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಮತದಾರರ ಪಟ್ಟಿಯನ್ನು ಸಿದ್ದಪಡಿಸಲು ಅಗತ್ಯ ಪರಿಷ್ಕರಣೆ ಮಾಡಲು ಅಗತ್ಯ ಕಾನೂನು ತಿದ್ದುಪಡಿ ಮತ್ತು ನಿಯಮಾವಳಿ ರಚನೆ ಮಾಡಲು ಹಾಗೂ ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ವ್ಯವಸ್ಥೆ ಬದಲಿಗೆ ಮತಪತ್ರÀ(ಬ್ಯಾಲೆಟ್ ಪೇಪರ್)ದ ಮೂಲಕ ಚುನಾವಣೆಯನ್ನು ನಡೆಸಲು ಶಿಫಾರಸ್ಸು ಮಾಡಲು ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಈ ಹಿಂದೆ ವಿಧಾನಸಭೆ ಚುನಾವಣೆಯ ಡಾಟಾವನ್ನು ಬಳಸಿಕೊಳ್ಳಲಾಗುತ್ತಿತ್ತು. ಈಗ ಮತದಾರ ಪಟ್ಟಿಯನ್ನು ಪರಿಷ್ಕರಣೆ, ತಿದ್ದುಪಡಿ, ಪುನರ್ರಚನೆ ಮಾಡಿ, ಉತ್ತಮ ಗುಣಮಟ್ಟದ ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ತಯಾರು ಮಾಡಿಕೊಳ್ಳಲು ಅನುಕೂಲವಾಗುವಂತೆ ಸೂಕ್ತ ಶಿಫಾರಸ್ಸನ್ನು ಮಾಡಲು ಹಾಗೂ ಚುನಾವಣಾ ಪದ್ಧತಿಯನ್ನೂ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲು ನಿರ್ಣಯ ಕೈಗೊಳ್ಳಲಾಗಿದೆ. ಈ ಪ್ರಕ್ರಿಯೆಯಲ್ಲಿ ಅಗತ್ಯವಾದ ಕೆಲವು ಕಾನೂನು ಹಾಗೂ ನಿಯಮಾವಳಿಗಳನ್ನು ತಿದ್ದುಪಡಿಗಳನ್ನು ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

26. ಚುನಾವಣೆಗಳಿಗೆ ಈ ಹೊಸ ನಿಯಮಗಳ ಬಗ್ಗೆ ಶಿಫಾರಸ್ಸು ರಾಜ್ಯ ಚುನಾವಣಾ ಆಯೋಗ ಸ್ವಾತಂತ್ರ ಸಂಸ್ಥೆಯಾಗಿದ್ದು, ಚುನಾವಣಾ ಪಟ್ಟಿ ತಯಾರು ಮಾಡುವ ಜವಾಬ್ದಾರಿ ಅದರದ್ದೇ ಆಗಿದೆ. ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆಯ 165 ನೇ ಪರಿಚ್ಛೇಧ ಹಾಗೂ ಮುನಿಸಿಪಾಲಿಟಿ ಕಾಯ್ದೆಯ 14 ನೇ ಪರಿಚ್ಛೇಧದಡಿ ಮತ್ತು ಜಿಬಿಎ ಕಾಯ್ದೆಯ 35 ಪರಿಚ್ಛೇಧದಡಿ ಚುನಾವಣೆಗಳು ಹೇಗೆ ನಡೆಯಬೇಕೆಂದು ವಿವರಿಸುತ್ತವೆ. ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಈ ಹೊಸ ನಿಯಮಗಳನ್ನು ಹಾಗೂ ಚುನಾವಣಾ ಪ್ರಕ್ರಿಯೆ ಪದ್ಧತಿಗಳನ್ನು ಶಿಫಾರಸು ಮಾಡಲು ಸಚಿವ ಸಂಪುಟ ನಿರ್ಣಯಿಸಿದೆ.

27. ಇತೀಚೆಗೆ ಕರ್ನಾಟಕದಲ್ಲಿ ಮತದಾರರ ಪಟ್ಟಿ ತಯಾರಿಕೆಯಲ್ಲಿಯೇ ಬಹಳ ವ್ಯತ್ಯಾಸಗಳಾಗಿರುವುದನ್ನು ಜನ ಕಂಡುಕೊಂಡಿದ್ದು, ದೊಡ್ಡ ಪ್ರಮಾಣದಲ್ಲಿ ದೂರುಗಳು ಬಂದಿವೆ. ದೊಡ್ಡ ಪ್ರಮಾಣದಲ್ಲಿ ಇಲ್ಲದ ಮತದಾರರನ್ನು ಸೇರಿಸಿದ್ದಾರೆ ಎಂಬ ಬಗ್ಗೆ ದೂರುಗಳನ್ನು ಕಳೆ ಎಂದು ತಿಂಗಳಿನಿಂದ ಚರ್ಚೆಯಾಗುತ್ತಿದ್ದು, ಇವಿಎಂ ಬಗ್ಗೆ ಸಾಮಾನ್ಯವಾಗಿ ವಿಶ್ವಾಸಾರ್ಹತೆ ಕಡಿಮೆಯಾಗುತ್ತಿದೆ. ವಿಶ್ವಾಸಾರ್ಹತೆಯ ಕೊರತೆಯನ್ನು ಗಮನಿಸಿ, ಜನರ ಮನಸ್ಥಿತಿ ಹಾಗೂ ಅಭಿಪ್ರಾಯದ ಹಿನ್ನೆಲೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆಯಾಗಬೇಕು ಎಂಬ ಉದ್ದೇಶವೇ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಹಿನ್ನೆಲೆಯಾಗಿದೆ.

28. ಚುನಾವಣಾ ಆಯೋಗ ಹೇಗಿರಬೇಕು , ಏನು ಮಾಡಬೇಕು ಎನ್ನುವ ಬಗ್ಗೆ ಕಾನೂನು ಇದೆ. ರಾಜ್ಯ ರಚಿಸಿರುವ ಕಾನೂನಿನ ಅನ್ವಯ ಅದು ಕಾರ್ಯನಿರ್ವಹಿಸುತ್ತದೆ ಎಂದರು. ಮುಂದಿನ 15 ದಿನಗಳಲ್ಲಿ ಅಗತ್ಯವಿರುವ ಕಾನೂನು ಬದಲಾವಣೆಗಳನ್ನು ಮಾಡಲಾಗುವುದು. ಯಾವುದೇ ಬದಲಾವಣೆಯಾದರೂ ಅದು ಸಚಿವ ಸಂಪುಟಕ್ಕೆ ಬಂದು ರಾಜ್ಯಪಾಲರಿಗೆ ಹೋಗಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಕೊಪ್ಪಳ : ಜಾತಿ ನಿಂದನೆ, ಫೋಟೋ ವಾಟ್ಸಾಪ್ ಸ್ಟೇಟಸ್ ಗೆ ಹಾಕೋದಾಗಿ ಬೆದರಿಕೆ : ಡೆತ್ ನೋಟ್ ಬರೆದಿಟ್ಟು ಮಹಿಳೆ ಸೂಸೈಡ್

05/09/2025 7:19 AM1 Min Read

BREAKING : ಮಂಡ್ಯದಲ್ಲಿ ದಾರುಣ ಘಟನೆ : ಎಮ್ಮೆ ತೊಳೆಯುವ ವೇಳೆ ಬಾವಿಗೆ ಬಿದ್ದು ದಂಪತಿ ದುರಂತ ಸಾವು!

05/09/2025 7:18 AM1 Min Read

ಧರ್ಮಸ್ಥಳದ ಸೌಜನ್ಯ ಪ್ರಕರಣದ ಕುರಿತು ‘SIT’ ಮರು ತನಿಖೆ ಮಾಡ್ತಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

05/09/2025 6:33 AM1 Min Read
Recent News

ಕೊಪ್ಪಳ : ಜಾತಿ ನಿಂದನೆ, ಫೋಟೋ ವಾಟ್ಸಾಪ್ ಸ್ಟೇಟಸ್ ಗೆ ಹಾಕೋದಾಗಿ ಬೆದರಿಕೆ : ಡೆತ್ ನೋಟ್ ಬರೆದಿಟ್ಟು ಮಹಿಳೆ ಸೂಸೈಡ್

05/09/2025 7:19 AM

BREAKING : ಮಂಡ್ಯದಲ್ಲಿ ದಾರುಣ ಘಟನೆ : ಎಮ್ಮೆ ತೊಳೆಯುವ ವೇಳೆ ಬಾವಿಗೆ ಬಿದ್ದು ದಂಪತಿ ದುರಂತ ಸಾವು!

05/09/2025 7:18 AM

ಕ್ರೀಡೆಯಷ್ಟೇ ಅಲ್ಲ, ಮಾನವೀಯತೆಯಲ್ಲೂ ಮುಂದೆ: ಪಂಜಾಬ್ ಕಿಂಗ್ಸ್‌ನಿಂದ ಪ್ರವಾಹ ಪರಿಹಾರಕ್ಕೆ ₹33.8 ಲಕ್ಷ ದೇಣಿಗೆ

05/09/2025 7:02 AM

ಯುಎಸ್-ಜಪಾನ್ ವ್ಯಾಪಾರ ಒಪ್ಪಂದಕ್ಕೆ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ ಟ್ರಂಪ್ | Trump tariff

05/09/2025 6:54 AM
State News
KARNATAKA

ಕೊಪ್ಪಳ : ಜಾತಿ ನಿಂದನೆ, ಫೋಟೋ ವಾಟ್ಸಾಪ್ ಸ್ಟೇಟಸ್ ಗೆ ಹಾಕೋದಾಗಿ ಬೆದರಿಕೆ : ಡೆತ್ ನೋಟ್ ಬರೆದಿಟ್ಟು ಮಹಿಳೆ ಸೂಸೈಡ್

By kannadanewsnow0505/09/2025 7:19 AM KARNATAKA 1 Min Read

ಕೊಪ್ಪಳ : ಜಾತಿ ನಿಂದನೆ ಮಹಿಳೆಯ ಫೋಟೋ ಸ್ಟೇಟಸ್ ಗೆ ಹಾಕುವ ಬೆದರಿಕೆ ಹಿನ್ನೆಲೆಯಲ್ಲಿ ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ…

BREAKING : ಮಂಡ್ಯದಲ್ಲಿ ದಾರುಣ ಘಟನೆ : ಎಮ್ಮೆ ತೊಳೆಯುವ ವೇಳೆ ಬಾವಿಗೆ ಬಿದ್ದು ದಂಪತಿ ದುರಂತ ಸಾವು!

05/09/2025 7:18 AM

ಧರ್ಮಸ್ಥಳದ ಸೌಜನ್ಯ ಪ್ರಕರಣದ ಕುರಿತು ‘SIT’ ಮರು ತನಿಖೆ ಮಾಡ್ತಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

05/09/2025 6:33 AM

ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ : ಗೂಡ್ಸ್ ವಾಹನದ ಗಾಜು ಒಡೆದು ಬೈಕ್ ಸವಾರ ಪುಂಡಾಟ

05/09/2025 6:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.