ಬೆಂಗಳೂರು : ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ ಅವಧಿಗಳು ಮತ್ತು ರಜಾ ಅವಧಿಗಳನ್ನು ನಿಗದಿಪಡಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಲಿದ್ದು, ಮುಂದಿನ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ದತೆಗಾಗಿ ದಿನಾಂಕ: 29.05.2025 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದೆ. ಪ್ರಯುಕ್ತ ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ, ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದ್ದು ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ತಿಳಿಸಿದೆ.
ವಿಶೇಷ ಸೂಚನೆಗಳು:
A. 2024-25 ನೇ ಶೈಕ್ಷಣಿಕ ಸಾಲಿನ ಮುಕ್ತಾಯ ಹಂತದಲ್ಲಿ ನಿರ್ವಹಿಸಬೇಕಾದ ಅಂಶಗಳ ಕುರಿತು
1) 1 ರಿಂದ 9ನೇ ತರಗತಿವರೆಗೆ ಮೌಲ್ಯಾಂಕನ ಪರೀಕ್ಷೆಗಳ ಮೌಲ್ಯಮಾಪನವನ್ನು ಪೂರ್ಣಗೊಳಿಸಿ ಫಲಿತಾಂಶವನ್ನು ಶೇ 100 ಅಂಕಗಳಿಗೆ ಕ್ರೋಢೀಕರಿಸಿ ನಿಯಮಾನುಸಾರ ಗ್ರೇಡ್ ದಾಖಲಿಸಿ SATS ನಲ್ಲಿ ಪ್ರಾಥಮಿಕ ಶಾಲೆಗಳಿಗೆ ಸಂಬಂಧಿಸಿದಂತೆ ದಿನಾಂಕ:07-04-2025 ರೊಳಗೆ ಹಾಗೂ ಪ್ರೌಢಶಾಲೆಗಳಿಗೆ ಸಂಬಂಧಿಸಿದಂತೆ ದಿನಾಂಕ:08-04-2025ರೊಳಗೆ ಇಂದೀಕರಿಸತಕ್ಕದ್ದು,
2) 5, 8 ಮತ್ತು 9ನೇ ತರಗತಿಯ SA-2 ಮೌಲ್ಯಾಂಕನ ಸೇರಿದಂತೆ ಉಳಿದ 1 ರಿಂದ 9 ನೇ ತರಗತಿಗಳ ಫಲಿತಾಂಶವನ್ನು ನಿಯಮಾನುಸಾರ ವಿಶ್ಲೇಷಿಸಿ, ನಿಗದಿಪಡಿಸಿದಂತೆ ದಿನಾಂಕ 08.04.2025 ರಂದು ಪ್ರಾಥಮಿಕ ಶಾಲಾ ಹಂತದಲ್ಲಿ ಹಾಗೂ ದಿನಾಂಕ 09.04.2025 ರಂದು ಪ್ರೌಢಶಾಲಾ ಹಂತದಲ್ಲಿ ಎರಡನೇ ಸಮುದಾಯ ದತ್ತ ಶಾಲೆ/ಪೋಷಕರ ಸಭೆ ಕರೆದು ಪ್ರಕಟಣೆ ಮಾಡುವುದು.
3) ದಿನಾಂಕ:14-04-2025 ರಂದು ಡಾ|| ಬಿ.ಆರ್ ಅಂಬೇಡ್ಕರ್ ರವರ ಜಯಂತಿಯನ್ನು ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಹಾಗೂ ಎಸ್.ಡಿ.ಎಂ.ಸಿ/ಖಾಸಗಿ ಶಾಲೆಗಳಲ್ಲಿ ಸಂಬಂಧಿಸಿದ ಆಡಳಿತ ಮಂಡಳಿಯವರು ಮತ್ತು ಮಕ್ಕಳೊಂದಿಗೆ ಉತ್ತಮ ಪೂರ್ವ ತಯಾರಿಯೊಂದಿಗೆ ಆಚರಿಸತಕ್ಕದ್ದು,
4) ಶಾಲಾ ಸ್ಥಳೀಯ ರಜೆಗಳಿಗೆ ಸಂಬಂಧಿಸಿದಂತೆ ಶಾಲಾವಾರು ನಿರ್ದಿಷ್ಟಪಡಿಸಿದ ದಿನಾಂಕಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪೂರ್ವಭಾವಿಯಾಗಿ ಜೂನ್-2025 ರ ಮೊದಲನೇ ವಾರದಲ್ಲಿ ಅನುಮೋದನೆ ನೀಡುವುದು. ಅನುಮೋದಿಸಿದ ದಿನಾಂಕಗಳಿಗೆ ಮಾತ್ರ ಸ್ಥಳೀಯ ರಜೆ ಹೊಂದುವುದು.
5) 2025-26 ನೇ ಸಾಲಿಗೆ ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ ಎಲ್ಲಾ ಮಕ್ಕಳಿಗೆ 02 ಜೊತೆ ಉಚಿತ ಸಮವಸ್ತ್ರ ಮತ್ತು ಪಠ್ಯಪುಸ್ತಕ ಹಾಗೂ ಖಾಸಗಿ ಶಾಲೆಗಳಿಗೆ ಪಠ್ಯಪುಸ್ತಕಗಳು ಸಂಬಂಧಿಸಿದ ತಾಲ್ಲೂಕುಗಳಿಗೆ ಸರಬರಾಜು ಆದ ತಕ್ಷಣ ಸಂಬಂಧಿಸಿದ ಶಾಲೆಗಳ ಮುಖ್ಯೋಪಾಧ್ಯಾಯರ ಮುಖಾಂತರ ಮಕ್ಕಳಿಗೆ ತಲುಪಿಸುವ ಕುರಿತು ಕ್ರಮವಹಿಸುವುದು.
6) ದಿನಾಂಕ:11-04-2025 ರಿಂದ ದಿನಾಂಕ:28-05-2025 ರವರೆಗೆ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆಯಾಗಿರುವುದರಿಂದ ಶಾಲಾ ಮುಖ್ಯಸ್ಥರು ಶಾಲಾ ದಾಸ್ತಾನು ಮತ್ತು ದಾಖಲೆಗಳನ್ನು ಹಾಗೂ ಅಕ್ಷರ ದಾಸೋಹ ಕಾರ್ಯಕ್ರಮದಡಿ ಮಧ್ಯಾಹ್ನದ ಬಿಸಿಯೂಟದ ಸಾಮಗ್ರಿಗಳನ್ನು V ಸುರಕ್ಷಿತವಾಗಿ ಸಂಗ್ರಹಿಸಿಡುವುದು ಹಾಗೂ ಬರಪೀಡಿತ ತಾಲ್ಲೂಕುಗಳಲ್ಲಿ ರಜಾ ಅವಧಿಯಲ್ಲಿ ಮಕ್ಕಳಿಗೆ ಬಿಸಿ ಊಟ ನೀಡುವ ಕುರಿತು ಸಂಬಂಧಿಸಿದ ನಿರ್ದೇಶನಾಲಯದಿಂದ ನೀಡುವ ಸೂಚನೆಗಳಂತೆ ಕ್ರಮವಹಿಸುವುದು. ಒಂದು ವೇಳೆ ಈ ಅವಧಿಯಲ್ಲಿ ಅಧಿಕೃತ ಚುನಾವಣಾ” ಕಾರ್ಯಕ್ಕೆ ಮತಗಟ್ಟೆ ಕೇಂದ್ರಗಳನ್ನಾಗಿ ಶಾಲೆಗಳನ್ನು ಬಳಸಲು ಸಂಬಂಧಿಸಿದ ಪ್ರಾಧಿಕಾರ ಕೋರಿದ್ದಲ್ಲಿ ಸಹಕರಿಸಲು ಸೂಚಿಸಿದೆ.