ಬೆಂಗಳೂರು : ಸರ್ಕಾರಿ ನೌಕರರು ಕಟ್ಟಡ ನಿರ್ಮಾಣಕ್ಕಾಗಿ ಅಥವಾ ಮನೆ ನಿರ್ಮಾಣಕ್ಕಾಗಿ ಅನುಮತಿ ನೀಡುವ ಆದೇಶ ಹಾಗೂ ಚೆಕ್ ಲಿಸ್ಟ್ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
1. ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021 (ಸಂಕ್ಷಿಪ್ತವಾಗಿ ‘2021ರ ನಿಯಮಗಳು), ದಿನಾಂಕ: 07-01-2021 ರಿಂದ ಜಾರಿಗೆ ಬಂದಿರುತ್ತದೆ.
2. 2021ರ ನಿಯಮಗಳ ನಿಯಮ 24(3) ರ ಅನುಸಾರ ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯನ್ನು ಹೊರತುಪಡಿಸಿ. ಬೇರೆ ಮೂಲಗಳಿಂದ ತನ್ನ ಹೆಸರಿನಲ್ಲಾಗಲಿ ಅಥವಾ ತನ್ನ ಕುಟುಂಬದ ಯಾವುದೇ ಸದಸ್ಯನ ಹೆಸರಿನಲ್ಲಾಗಲಿ ಗುತ್ತಿಗೆಯ, ಅಡಮಾನದ, ಖರೀದಿಯ, ಮಾರಾಟದ, ಉಡುಗೊರೆಯ ಮೂಲಕ ಅಥವಾ ಅನ್ಯಥಾ ಸ್ಥಿರ ಸ್ವತ್ತನ್ನು ಅರ್ಜಿಸುವ ಅಥವಾ ವಿಲೇ ಮಾಡುವ ಬಗೆ, ನಿಯಮಿಸಲಾದ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕಾಗುತ್ತದೆ. ಒಂದು ವೇಳೆ ಸಮರ್ಥನೀಯ ಕಾರಣಗಳಿಂದಾಗಿ ನಿಯಮಿತ ಪ್ರಾಧಿಕಾರಿಗೆ ಮೊದಲೇ ತಿಳಿಸದೇ ಯಾವುದೇ ಸ್ಥಿರ ಸ್ವತ್ತನ್ನು ಅರ್ಜಿಸಿದಲ್ಲಿ ಅಥವಾ ಎಲೇ ಮಾಡಿದ್ದಲ್ಲಿ ಅಂತಹ ವ್ಯವಹಾರ ಕೈಗೊಂಡ ಎರಡು ತಿಂಗಳೊಳಗಾಗಿ ವಿವರಗಳು ಹಾಗೂ ಪೂರಕ ದಾಖಲೆಗಳು ಮತ್ತು ಸಮರ್ಥನೀಯ ಕಾರಣಗಳೊಂದಿಗೆ ನಿಯಮಿತ ಪ್ರಾಧಿಕಾರಿಗೆ ವರದಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಹಾಗೆ ಸರ್ಕಾರಿ ನೌಕರನು ನೀಡಿದ ಕಾರಣಗಳು ಅಂಗೀಕಾರಾರ್ಹವೆಂದು ತೃಪ್ತಿಪಟ್ನಲ್ಲಿ ಸರ್ಕಾರಿ ನೌಕರನು ಸಲ್ಲಿಸಿದ ದಾಖಲೆಗಳು ಹಾಗೂ ವಿವರಗಳನ್ನು ಪರಿಶೀಲಿಸಿ ಅಂತಹ ವ್ಯವಹರಣೆಯನ್ನು ಘಟನೋತ್ತರವಾಗಿ ನಿಯಮಿತ ಪ್ರಾಧಿಕಾರವು ಟಿಪ್ಪಣಿ ಮಾಡಿಕೊಳ್ಳಬಹುದಾಗಿದೆ. ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯೊಂದಿಗಿನ ವ್ಯವಹಾರವಾದರೆ ಮಾತ್ರ ಸರ್ಕಾರಿ ನೌಕರನಿಗೆ ನಿಯಮಿಸಲಾದ ಪ್ರಾಧಿಕಾರಿಯ ಪೂರ್ವ ಮಂಜೂರಾತಿ ಅಗತ್ಯವಿರುತ್ತದೆ.
3. 2021ರ ನಿಯಮಗಳ ನಿಯಮ 24(4)ರ ಅನುಸಾರ ಸರ್ಕಾರಿ ನೌಕರನು ತನ್ನ ಸ್ವಂತ ಹೆಸರಿನಲ್ಲಾಗಲೀ ಅಥವಾ ತನ್ನ ಕುಟುಂಬದ ಯಾರೇ ಸದಸ್ಯರ ಹೆಸರಿನಲ್ಲಾಗಲೀ ತಾನು ಅಥವಾ ತನ್ನ ಕುಟುಂಬದ ಯಾರೇ ಸದಸ್ಯರು ಒಡೆತನ ಹೊಂದಿರುವ ಅಥವಾ ಧಾರಣ ಮಾಡಿರುವ ಚರಾಸ್ತಿಯ ಸಂಬಂಧದಲ್ಲಿ ಮಾಡುವ ಪ್ರತಿಯೊಂದು ವ್ಯವಹಾರವನ್ನು ಅಂತಹ ಸ್ಮತ್ತಿನ ಮೌಲ್ಯವು ಆತನ ಮಾಸಿಕ ಮೂಲವೇತನ ಮೀರಿದರೆ ನಿಯಮಿಸಿದ ಪ್ರಾಧಿಕಾರಕ್ಕೆ, ವರದಿ ಮಾಡತಕ್ಕದ್ದು. ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯೊಂದಿಗಿನ ವ್ಯವಹಾರವಾದರೆ ಮಾತ್ರ ನಿಯಮಿಸಲಾದ ಪ್ರಾಧಿಕಾರದ ಪೂರ್ವ ಅಗತ್ಯವಿರುತ್ತದೆ.