ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ, ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಭೇಟಿ ಮಾಡುವ ವಿಚಾರವಾಗಿ, ಸದ್ಯಕ್ಕೆ ಹೈಕಮಾಂಡ್ ಕರೆದಿಲ್ಲ ಹಾಗಾಗಿ ದೆಹಲಿಗೆ ಹೋಗಲ್ಲ ಎಂದು ಸ್ಪಷ್ಟನೆ ನೀಡಿದರು.
ಮೈಸೂರಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮೇ 15 ರಂದು ದೆಹಲಿಗೆ ಹೋಗುತ್ತೇನೆ ಎಂದು ಹೇಳಿದವರು ಯಾರು? ಮೇ 15 ಎಂಬ ದಿನಾಂಕ ನೀವೇ ಯಾಕೆ ನಿಗದಿ ಮಾಡಿದ್ದೀರಿ? ಹೈಕಮಾಂಡ್ ಕರೆದಾಗ ದೆಹಲಿಗೆ ಹೋಗುತ್ತೇನೆ. ಸಚಿವ ಸಂಪುಟ ಪುನಾರಚನೆ ಮಾಡುತ್ತೇನೇ ಆ ಬಗ್ಗೆ ಚರ್ಚೆಗೆ ಹೈಕಮಾಂಡ್ ಕರೆದಾಗ ಹೋಗ್ತೇನೆ. ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯ ಸರ್ಕಾರ ಶಾಲೆಗಳಲ್ಲಿ ಹಿಜಾಬ್ ಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಇದೇ ವಿಚಾರವಾಗಿ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಸರಿ ಶಾಲು ಹಾಕಿಕೊಂಡು ಬರಲು ಅವಕಾಶ ಇಲ್ಲ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಜನಿವಾರ, ಶಿವದಾರ, ಟರ್ಬನ್, ರುದ್ರಾಕ್ಷಿ ಹಾಗೂ ಹಿಜಾಬ್ ಹಾಕಿಕೊಳ್ಳಬಹುದು ಆದರೆ ಕೇಸರಿ ಶಾಲುಗಳನ್ನು ಹಾಕಿಕೊಳ್ಳಲು ಅವಕಾಶ ಇಲ್ಲ. ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.








