ಬೆಂಗಳೂರು : ಕಾಂಗ್ರೆಸ್ ಪಕ್ಷದ ಕೆಲವು ಶಾಸಕರಿಂದ ಅಧ್ಯಯನದ ಹೆಸರಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದು ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಶಾಸಕರ ವಿದೇಶ ಪ್ರವಾಸಕ್ಕೆ ಬ್ರೇಕ್ ಹಾಕುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಕೆಲಸವರಿಗೆ ಹೈಕಮಾಂಡ್ ನಾಯಕರು ಕರೆ ಮಾಡುವ ಸಾಧ್ಯತೆಯಿದ್ದು ದೂರವಾಣಿ ಮೂಲಕ ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಶಾಸಕರಿಗೆ ಬ್ರೇಕ್ ಹಾಕುವ ಸಾಧ್ಯತೆ ಇದು ಈಗಾಗಲೇ ಹೈಕಮಾಂಡ್ ನಾಯಕರು ಶಾಸಕರ ವಿದೇಶ ಪ್ರವಾಸದ ಕುರಿತು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.








