ಬೆಂಗಳೂರು: 348 ಕೆಎಎಸ್ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ (KPSC) ಅನುಮತಿ ನೀಡಿದೆ.
ಸರ್ಕಾರಿ ನೇಮಕಾತಿಯಲ್ಲಿ ಮೀಸಲು ಜಾರಿ ವಿಚಾರದಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂಬ ಕಾರಣಕ್ಕೆ 384 ಕೆಎಎಸ್ ಅಧಿಕಾರಿಗಳ ನೇಮಕಾತಿ ಕುರಿತ ಅಧಿಸೂಚನೆ ರದ್ದುಗೊಳಿಸಿದ್ದ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್, ಕೆಎಎಸ್ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್ಸಿ) ಅನುಮತಿ ನೀಡಿದೆ.
ಮುಖ್ಯ ಪರೀಕ್ಷೆ ಬರೆದು ನೇಮಕಾತಿಗೆ ಕಾಯುತ್ತಿದ್ದ ಅಭ್ಯರ್ಥಿಗಳು ನೆಮ್ಮದಿಯ ನಿಟ್ಟಿಸಿರು ಬಿಡುವಂತಾಗಿದೆ. ಕಳೆದ ಮೇ 28ರಂದು ಕೆಎಟಿ ನೀಡಿದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಆಲಿಸಿದ ನ್ಯಾಯಮೂರ್ತಿ ಡಿ.ಕೆ. ಸಿಂಗ್, ನ್ಯಾಯಮೂರ್ತಿ ವೆಂಕಟೇಶ ಟಿ. ನಾಯಕ್ ಅವರಿದ್ದ ವಿಭಾಗಿಯ ಪೀಠದಿಂದ ಈ ಮಧ್ಯಂತರ ಆದೇಶ ನೀಡಲಾಗಿದೆ.