ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನವೆಂಬರ್ 6 ರಂದು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ಅವರು ಈ ಒಂದು ಪ್ರಕರಣದ ತನಿಖೆಗೆ ಸಿಬಿಐ ತನಿಖೆ ನಡೆಸಿ ಎಂದು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಹೌದು ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅವರು ಸಲ್ಲಿಸಿರುವ ರಿಟ್ ಅರ್ಜಿ ನಾಳೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರಿರುವ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಲಾಗುತ್ತದೆ. ಲೋಕಾಯುಕ್ತ ಪೊಲೀಸರಿಂದ ಸೂಕ್ತ ತನಿಖೆ ಸಾಧ್ಯವಿಲ್ಲ ಎಂದು ಸ್ನೇಹಮಯಿ ಕೃಷ್ಣ ರಿಟ್ ಅರ್ಜಿ ಸಲ್ಲಿಸಿದ್ದರು.
ಇನ್ನು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಬಿಗ್ ಶಾಕ್ ನೀಡಿದ್ದು, ಇಂದು ಲೋಕಾಯುಕ್ತ ಅಧಿಕಾರಿಗಳು ನವೆಂಬರ್ 6 ರಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು ನಾನು ಲೋಕಾಯುಕ್ತ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಇದೇ ವೇಳೆ ತಿಳಿಸಿದರು.