ಬೆಂಗಳೂರು : ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಫೆಬ್ರವರಿ 28 ರ ನಾಳೆ ಶಿಕ್ಷಣ ಇಲಾಖೆ ಮಹತ್ವದ ಸಭೆ ನಿಗದಿಪಡಿಸಿದೆ.
ಈ ಕುರಿತು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಶಾಲಾ ಶಿಕ್ಷಣ ಇಲಾಖೆಯ ವಿವಿಧ ಘಟಕಗಳಲ್ಲಿನ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಪ್ರೌಢಶಾಲಾ ಶಿಕ್ಷಕರುಗಳ ರಾಜ್ಯ ಮಟ್ಟದ ಒಂದೇ ಕ್ರೋಢಿಕೃತ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಕುರಿತಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ದಿನಾಂಕ:28/02/2025ರ ಪೂರ್ವಾಹ್ನ 11.00 ಗಂಟೆಗೆ ಕೊಠಡಿ ಸಂಖ್ಯೆ:649, ಸಭಾಂಗಣ, 6ನೇ ಮಹಡಿ, ಶಾಲಾ ಶಿಕ್ಷಣ ಇಲಾಖೆ, ಇಲ್ಲಿ ಸಭೆಯನ್ನು ಏರ್ಪಡಿಸಲಾಗಿದೆ. ಸದರಿ ಸಭೆಗೆ ತಾವುಗಳು ತಪ್ಪದೇ ಹಾಜರಾಗುವಂತೆ ಈ ಮೂಲಕ ಕೋರಲಾಗಿದೆ.