ಹಿರಿಯೂರು : ಹಿರಿಯೂರು ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದು, 6 ಮಂದಿಯನ್ನು ಬಂಧಿಸಲಾಗಿದೆ.
ಹಿರಿಯೂರು ಗ್ರಾಮಾಂತರ ಠಾಣೆ ಪಿಎಸ್ಐ ಮಹೇಶ್ ಗೌಡ ಅವರು ದಾಳಿ ನಡೆಸಿದ್ದಾರೆ. 6 ಮಂದಿಯನ್ನು ಬಂಧಿಸಿದ್ದು, ಬಂಧಿತರಿಂದ ಸುಮಾರು 20 ಸಾವಿರ ನಗದು ಹಾಗೂ ಆಟಕ್ಕೆ ಬಳಸಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆರು ಜನರಲ್ಲಿ ಓರ್ವ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಮೋಹನ್ ಸೇರಿದಂತೆ ಆರು ಮಂದಿ ಬಂಧನವಾಗಿದೆ.
ಕಳೆದ ಮಂಗಳವಾರದಂದು ದಾಳಿ ಮಾಡಲಾಗಿತ್ತು. ನಿನ್ನೆ ಮತ್ತೊಂದು ಅಡ್ಡೆಯ ಮೇಲೆ ದಾಳಿ ಮಾಡಿ ಬಂಧಿಸಲಾಗಿದೆ .ಹಿರಿಯೂರು ತಾಲ್ಲೂಕಿನ ಆಲೂರು ಗ್ರಾಮದ ಬಳಿ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದವರ ಮೇಲೆ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ಮಹೇಶ್ ಗೌಡ ಅವರು ದಾಳಿ ನಡೆಸಿ, 10 ಮಂದಿಯನ್ನು ಬಂಧಿಸಿದ್ದು, ಬಂಧಿತರಿಂದ 18450 ನಗದು ಹಾಗೂ ಇಸ್ಪೀಟ್ ಗರಿಗಳನ್ನು ವಶಪಡಿಸಿಕೊಂಡಿದ್ದರು. ಹಿರಿಯೂರು ಗ್ರಾಮಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.