ನವವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದನ್ನು ತಳ್ಳಿಹಾಕಿದ್ದಾರೆ, ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಿಂದ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವುದಾಗಿ ಪ್ರತಿಜ್ಞೆ ಮಾಡಿದರು. ಅವರು ಇಂದು ಬಾರಾಮುಲ್ಲಾದಲ್ಲಿ ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು 1990 ರ ದಶಕದಿಂದೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ 42,000 ಜನರನ್ನು ಬಲಿ ತೆಗೆದುಕೊಂಡಿದೆ ಎಂದು ಹೇಳಿದರು.

’70 ವರ್ಷಗಳ ಕಾಲ ಆಳಿದವರು ಪಾಕಿಸ್ತಾನದೊಂದಿಗೆ ಮಾತನಾಡಿ ಎಂದು ಹೇಳುತ್ತಿದ್ದಾರೆ. ನಾವು ಪಾಕಿಸ್ತಾನದೊಂದಿಗೆ ಏಕೆ ಮಾತನಾಡಬೇಕು? ನಾವು ಮಾತನಾಡುವುದಿಲ್ಲ. ನಾವು ಬಾರಾಮುಲ್ಲಾದ ಜನರೊಂದಿಗೆ ಮಾತನಾಡುತ್ತೇವೆ, ನಾವು ಕಾಶ್ಮೀರದ ಜನರೊಂದಿಗೆ ಮಾತನಾಡುತ್ತೇವೆ” ಎಂದು ಅಮಿತ್ ಶಾ ಹೇಳಿದರು. ಇದೇ ವೇಳೆಅ ವರು”ಜಮ್ಮು ಮತ್ತು ಕಾಶ್ಮೀರವನ್ನು ದೇಶದ ಅತ್ಯಂತ ಶಾಂತಿಯುತ ಸ್ಥಳವನ್ನಾಗಿ ಮಾಡಲು ನಾವು ಬಯಸುತ್ತೇವೆ” ಎಂದು ಅವರು ಹೇಳಿದರು.

 

Share.
Exit mobile version