ಬೆಂಗಳೂರು : ಸಚಿವ ಕೆ ಎನ್ ರಾಜಣ್ಣ ಹನಿ ಟ್ರಾಪ್ ಹಾಗೂ ಅವರ ಪುತ್ರ ಎಂಎಲ್ಸಿ ರಾಜೇಂದ್ರ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದು ತನಿಖೆ ವೇಳೆ ಯಾವುದೇ ವಿಷಯವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತನಿಖೆ ವೇಳೆ ಯಾವುದೇ ವಿಚಾರ ಬಹಿರಂಗ ಪಡಿಸುವುದಿಲ್ಲ. ರಾಜೇಂದ್ರ ಅವರ ಹತ್ಯೆ ಕುರಿತು ಆಡಿಯೋ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆಯ ವರದಿ ಬಂದ ಬಳಿಕವಷ್ಟೇ ಮಾಹಿತಿ ನೀಡುತ್ತೇನೆ. ಹನಿಟ್ರ್ಯಾಪ್ ಮತ್ತು ಹತ್ಯೆಗೆ ಸುಪಾರಿ ನೀಡಿದ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಆ ಬಗ್ಗೆ ಯಾವುದೇ ಮಾಹಿತಿ ನೀಡುವುದಿಲ್ಲ ಎಂದು ಜಿ.ಪರಮೇಶ್ವರ್ ತಿಳಿಸಿದರು.