ಚಿಕ್ಕಬಳ್ಳಾಪುರ : ಕಾರು ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಹೊರವಲಯದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಬೈಕ್ ಸವಾರರಾದ ನಾಗರಾಜು (68) ಹಾಗು ವೆಂಕಟರೆಡ್ಡಿ (50) ಮೃತ ದುರ್ದೈವಿಗಳು
ಬೈಕ್ ಗೆ ಕಾರು ಡಿಕ್ಕಿ ಹೊಡೆದು ಸುಮಾರು 200 ಮೀಟರ್ ವರೆಗೂ ಎಳೆದೊಯ್ದಿದೆ. ಅಪಘಾತ ನಂತರ ಕಾರು ನಿಲ್ಲಿಸಿ ಚಾಲಕ ಮತ್ತು ಇತರರು ಪರಾರಿಯಾಗಿದ್ದಾರೆ. ಅಪಘಾತದ ಕುರಿತು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








