BIG NEWS : ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ಹಿಟ್ & ರನ್‍ಗೆ ಸಹಕಾರ ಸಂಘದ ಮಹಿಳಾ ಸಿಬ್ಬಂದಿ ಬಲಿ!

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಆಲ್ದೂರು ಬಳಿ ಪ್ರವಾಸಿ ವಾಹನ ಡಿಕ್ಕಿಯಾಗಿ ಅಲ್ಲಿನ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ವಾಹನ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ. ಮೃತರನ್ನು ನವಮಿ (26) ಎಂದು ಗುರುತಿಸಲಾಗಿದೆ. ಇವರು ಆಲ್ದೂರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೆಲಸ ಮಾಡುತ್ತಿದ್ದರು.ಅಪಘಾತ ಎಸಗಿದ ವಾಹನ ತುಮಕೂರು ಜಿಲ್ಲೆಯ ತಿಪಟೂರು ಮೂಲದ್ದು ಎಂದು ತಿಳಿದು ಬಂದಿದೆ. ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.