ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದೊಡ್ಡರಿ ಕಾವಲು ಗೇಟ್ ಬಳಿ ಸ್ಕೂಟಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಮೃತರನ್ನ ರಮೇಶ್ (23) ಮತ್ತು ಪುರುಷೋತ್ತಮ್ (26) ಎಂದು ತಿಳಿದುಬಂದಿದೆ. ರಮೇಶ್ ಹಾಗೂ ಕಿರಣ್ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ಬರುತ್ತಿದ್ದ ಪುರುಷೋತ್ತಮ್ ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯ ತೀವ್ರತೆಯಿಂದ ರಮೇಶ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರೆ, ಬೈಕ್ ಸವಾರ ಪುರುಷೋತ್ತಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಸ್ಕೂಟಿಯಲ್ಲಿದ್ದ ಕಿರಣ್ ಗಂಭೀರ ಗಾಯಗಳೊಂದಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಸಾವೆ ಠಾಣಾ ಸಿಬ್ಬಂದಿ ಭೇಟಿ ನೀಡಿ, ಪರಿಶೀಲಿಸಿದ್ದು, ದೂರು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಅಪಘಾತದಿಂದಾಗಿ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸ್ಥಳೀಯರು ರಸ್ತೆ ಸುರಕ್ಷತಾ ಕ್ರಮಗಳನ್ನು ಬಲಪಡಿಸುವಂತೆ ಆಗ್ರಹಿಸಿದ್ದಾರೆ.








