ತುಮಕೂರು : ತುಮಕೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಬೈಕ್ ಮೇಲಿಂದ ಬಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ನಾಗವಲ್ಲಿ ಗ್ರಾಮದ ಬಳಿ ನಡೆದಿದೆ.
ಮೃತ ಯುವಕರನ್ನು ರಂಗನಾಥಪುರದ ಪ್ರತಾಪ್ (20) ವಸಂತ್ (22) ಎಂದು ತಿಳಿದುಬಂದಿದೆ. ರಂಗನಾಥಪುರದಿಂದ ತುಮಕೂರು ಕಡೆಗೆ ಹೋಗುವಾಗ ಅಪಘಾತ ಸಂಭವಿಸಿದೆ. ತೀವ್ರವಾಗಿ ರಕ್ತಸ್ರಾವ ಲ್ ಆಗಿ ಸ್ಥಳದಲ್ಲೇ ಪ್ರಸಾದ್ ವಸಂತ್ ಸಾವನ್ನಪ್ಪಿದ್ದರೆ. ಹೆಬ್ಬುರೂ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.








