ಯಾದಗಿರಿ : ಯಾದಗಿರಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಕ್ರೂಸರ ವಾಹನ ಡಿಕ್ಕಿಯಾಗಿ ಬೈಕಿನಲ್ಲಿ ಇದ್ದ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಅಲ್ದಾಳ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಬೈಕಿಗೆ ಡಿಕ್ಕಿ ಹೊಡೆದು ಕ್ರೂಸರ್ ವಾಹನ ಪಲ್ಟಿಯಾಗಿದೆ. ಇನ್ನು ಕ್ರೂಸರ್ ನಲ್ಲಿ ಇದ್ದಂತಹ ಹಲವರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿದಂತೆ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಮೃತರ ಗುರುತು ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.








