ಕಲಬುರ್ಗಿ : ಕಲಬುರ್ಗಿಯಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು, ಭೀಮಾ ನದಿಗೆ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು ಪುಂಡಲೀಕ ಮೂಲಿಮನಿ (17) ಹಾಗೂ ಮಹೇಶ್ (16) ಎಂದು ತಿಳಿದು ಬಂದಿದೆ. ಹರಕೆ ತೀರಿಸಲು ಇಬ್ಬರು ಮಣ್ಣೂರ್ ಯಲ್ಲಮ್ಮನ ದೇಗುಲಕ್ಕೆ ಬಂದಿದ್ದರು. ಈ ವೇಳೆ ನದಿಯಲ್ಲಿ ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ. ಅಫ್ಜಲ್ಪುರ ತಾಲೂಕಿನ ಗೌರ್ ಕೆ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಘಟನೆ ಕುರಿತು ಅಫಜಲ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








