ವಿಜಯಪುರ : ವಿಜಯಪುರದಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು ವಾಚ್ ವಿಚಾರವಾಗಿ ಗಲಾಟೆ ನಡೆದು 5ನೇ ತರಗತಿ ಬಾಲಕನ ಮೇಲೆ ಹಲ್ಲೆ ನಡೆದಿದೆ. ಆದರೆ ಹಲ್ಲೆಗೊಳಗಾದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ, ವಿಜಯಪುರ ನಗರದ ಹೊರಭಾಗದ ಯೋಗಾಪುರದಲ್ಲಿ ನಡೆದಿದೆ.
ಹೌದು ಬಿಹಾರ ಮೂಲದ ಸುನೀಲ್ ಹಾಗೂ ಶೃತಿ ದಂಪತಿ. ಸುನೀಲ್ ಅವರು ನಗರದಲ್ಲಿ ಪಾನಿಪುರಿ ಮಾರಾಟ ಮಾಡಿ ಜೀವನ ಮಾಡುತ್ತಿದ್ದರು. ಇತ್ತ ತನ್ನ ಮಗಾ ಅನ್ಸ್ ನನ್ನು ಶ್ರೀ ಸತ್ಯಸಾಯಿ ಬಾಬಾ ಶಿಕ್ಷಣ ಸಂಸ್ಥೆಯ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗೆ ಸೇರಿಸಿದ್ದರು. ಕಳೆದ 5 ದಿನಗಳ ಹಿಂದೆ ಅನ್ಸ್ ಹಾಕಿಕೊಂಡಿದ್ದ ಅದೊಂದು ವಾಚ್ ಕಾರಣಕ್ಕೆ ಶಾಲೆಯಲ್ಲಿ ಗಲಾಟೆ ಆಗಿತ್ತಂತೆ. 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಅನ್ಸ್ ಮೇಲೆ ಹಲ್ಲೆ ಮಾಡಿ ವಾಚ್ ಕಿತ್ತುಕೊಂಡಿದ್ದರಂತೆ. ಆ 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಅನ್ಸ್ಗೆ ಹೊಡೆದ ಕಾರಣ ಆತ ಅಸ್ವಸ್ಥನಾಗಿದ್ದ.
ಪೋಷಕರು ಮಗ ಅನ್ಸ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ 5 ದಿನಗಳ ಬಳಿಕ ಸಾವನ್ನಪ್ಪಿದ್ದಾನೆ. ಹಲ್ಲೆ ವಿಚಾರ ಶಾಲಾ ಮುಖ್ಯಸ್ಥರಿಗೆ ತಿಳಿಸಿದ್ದರೂ ಸ್ಪಂದಿಸಿರಲಿಲ್ಲ. ನಿಮ್ಮ ಮಗ ಏನಾದರೂ ಸತ್ತಿದ್ದಾನಾ ಎಂದು ವಿದ್ಯಾರ್ಥಿ ಪೋಷಕರಿಗೆ ಬೆದರಿಕೆ ಹಾಕಿದ್ದು, ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯವೇ ಮಗನ ಸಾವಿಗೆ ಕಾರಣವೆಂದು ಪೋಷಕರು, ಸ್ಥಳೀಯರ ಆರೋಪಿಸಿದ್ದಾರೆ. ಬಾಲಕನ ಶವ ಶಾಲೆಯ ಗೇಟ್ ಬಳಿ ಇಟ್ಟು ಪ್ರತಿಭಟನೆ ಆರಂಭಿಸುತ್ತಿದ್ದಂತೆ ಶಾಲಾ ಆಡಳಿತ ಮಂಡಳಿಯವರು ಹಾಗೂ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು ಶಾಲೆಗೆ ಬೀಗ ಹಾಕಿ ಪರಾರಿಯಾಗಿದ್ಧಾರೆ.
ಶಾಲೆ ಮುಂದೆ ವಿದ್ಯಾರ್ಥಿ ಶವವಿಟ್ಟು ಪ್ರತಿಭಟನೆ
ಬಾಲಕನ ಶವ ಶಾಲೆಯ ಗೇಟ್ ಬಳಿ ಇಟ್ಟು ಪ್ರತಿಭಟನೆ ಆರಂಭಿಸುತ್ತಿದ್ದಂತೆ ಶಾಲಾ ಆಡಳಿತ ಮಂಡಳಿಯವರು ಹಾಗೂ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು ಶಾಲೆಗೆ ಬೀಗ ಹಾಕಿ ಪರಾರಿಯಾಗಿದ್ಧಾರೆ. ಪ್ರತಿಭಟನಾ ನಿರತ ಮೃತ ಬಾಲಕನ ಪೋಷಕರು ಹಾಗೂ ಸ್ಥಳಿಯರೊಂದಿಗೆ ಮಾತುಕತೆ ನಡೆಸಿದರು. ಘಟನೆ ಕುರಿತು ದೂರು ನೀಡಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆಂದು ಭರವಸೆ ನೀಡಿದರು. ಪ್ರತಿಭಟನೆಯನ್ನು ಕೈಬಿಟ್ಟು ಮುಂದಿನ ಪ್ರಕ್ರಿಯೆಗೆ ಅವಕಾಶ ನೀಡಿ ಎಂದು ಹೇಳಿದರು.
ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ ಕಾರಣ ಬಾಲಕನ ಶವವನ್ನು ಮಣೋತ್ತರ ಪರೀಕ್ಷೆಗೆ ರವಾನೆ ಮಾಡಲು ಪೋಷಕರು ಹಾಗೂ ಸ್ಥಳಿಯರು ಸಹಕಾರ ನೀಡಿದರು. ಪ್ರತಿಭಟನೆ ಕೈಬಿಟ್ಟು ಶಾಲಾ ಆಡಳಿತ ಮಂಡಳಿ ವಿರುದ್ದ ದೂರು ನೀಡೋದಾಗಿ ಮಾಹಿತಿ ನೀಡಿದ್ದಾರೆ. ಸ್ಥಳಿಯರು ಮಾತ್ರ ಈ ಘಟನೆಗೆ ಶಾಲೆಯ ಮುಖ್ಯಸ್ಥರೇ ಕಾರಣವೆಂದು ತೀವ್ರ ಅಸಮಾಧಾನ ಹೊರ ಹಾಕಿದ್ಧಾರೆ. ಸದ್ಯ ಬಾಲಕ ಸಾವಿಗೆ ಶಾಲಾ ಆಡಳಿತ ಮಂಡಳಿ ಮುಖ್ಯಸ್ಥರು ಕಾರಣವೆಂಬ ಆರೋಪ ಕೇಳಿ ಬಂದಿದೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.