ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು ಈ ಮೂಲಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಬಲ 136 ರಿಂದ 138ಕ್ಕೆ ಹೆಚ್ಚಳವಾಗಿದೆ.
ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಬಂದಿದ್ದು, ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿರುವಂತಹ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ 9 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರು, 73417 ಮತಗಳನ್ನ ಪಡೆದುಕೊಂಡಿದ್ದು, ಇನ್ನು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು, 99,320 ಮತಗಳನ್ನ ಪಡೆದಿದ್ದಾರೆ. ಇಬ್ಬರ ಮಧ್ಯ ಒಟ್ಟು 25,193 ಸಿಪಿ ಯೋಗೇಶ್ವರ್ ಮತಗಳ ದಿಂದ ಮುನ್ನಡೆ ಸಾಧಿಸಿ ಗೆಲುವು ಸಾಧಿಸಿದ್ದಾರೆ.
ವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾನ್ ಖಾನ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಖಾನ್ ಅವರು 88,985 ಮತಗಳನ್ನು ಪಡೆದುಕೊಂಡಿದ್ದರೆ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರು 74,860 ಮತಗಳನ್ನು ಪಡೆದುಕೊಂಡಿದ್ದಾರೆ. ಹಾಗಾಗಿ ಇವರ ಮಧ್ಯೆ 14,428 ಮತಗಳ ಅಂತರವಿದೆ ಎಂದು ತಿಳಿದುಬಂದಿದೆ.
ಜೆಡಿಎಸ್ ನ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಂಸದರಾಗಿ ಆಯ್ಕೆಯಾಗಿದ್ದರಿಂದ ಚನ್ನಪಟ್ಟಣ ಕ್ಷೇತ್ರ ತೆರವಾಗಿತ್ತು. ಬಿಜೆಪಿಯ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಿಗ್ಗಾವಿ ಕ್ಷೇತ್ರ ತೆರವಾಗಿತ್ತು. ಜೆಡಿಎಸ್ ಮತ್ತು ಬಿಜೆಪಿ ಈ ಕ್ಷೇತ್ರಗಳನ್ನು ಕಳೆದುಕೊಂಡಿವೆ.
ಈ. ತುಕಾರಾಂ ಸಂಸದರಾಗಿ ಆಯ್ಕೆಯಾಗಿದ್ದರಿಂದ ಸಂಡೂರಿನಲ್ಲಿ ಅವರ ಪತ್ನಿ ಅನ್ನಪೂರ್ಣ ಜಯಗಳಿಸಿದ್ದಾರೆ. ತುಕಾರಾಂ ಸಂಸದರಾಗಿದ್ದರಿಂದ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಬಲ 136ರಿಂದ 135 ಕ್ಕೆ ಇಳಿದಿತ್ತು. ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಜಯಗಳಿಸಿದ್ದು, ವಿಧಾನಸಭೆಯಲ್ಲಿ ತನ್ನ ಬಲವನ್ನು 138ಕ್ಕೆ ಹೆಚ್ಚಿಸಿಕೊಂಡಿದೆ. ಬಿಜೆಪಿ ಸದಸ್ಯ ಬಲ 66 ರಿಂದ 65ಕ್ಕೆ ಕುಸಿತವಾಗಿದೆ. ಜೆಡಿಎಸ್ ಸದಸ್ಯ ಬಲ 19 ರಿಂದ 18ಕ್ಕೆ ಕುಸಿತ ಕಂಡಿದೆ.