ಬೆಂಗಳೂರು : ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ, ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು.
ಈ ಕುರಿತು ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ HD ಕುಮಾರಸ್ವಾಮಿ, ನನ್ನ ಸಂಪುಟ ಸಹೋದ್ಯೋಗಿ, ಕೇಂದ್ರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಶ್ರೀ @byadavbjp ಅವರನ್ನು ಭೇಟಿಯಾಗಿ ಅಂತರ ಸಚಿವಾಲಯ ಸಂಬಂಧಿತ ವಿಷಯಗಳು ಹಾಗೂ ಅಭಿವೃದ್ಧಿ ಕುರಿತಂತೆ ರಚನಾತ್ಮಕ ಚರ್ಚೆ ನಡೆಸಲಾಯಿತು.
ಬಹು ಮುಖ್ಯವಾಗಿ ಕರ್ನಾಟಕದಲ್ಲಿ ಮಾನವ- ವನ್ಯಜೀವಿ ಸಂಘರ್ಷ, ನಿರಂತರವಾಗಿ ನಡೆಯುತ್ತಿರುವ ಆನೆ ದಾಳಿಯನ್ನು ತಡೆಗಟ್ಟುವ ಕ್ರಮಗಳ ಕುರಿತಂತೆ ಮಾತುಕತೆ ನಡೆಸಲಾಯಿತು. ಮಾನವ-ವನ್ಯಜೀವಿ ಸಂಘರ್ಷವನ್ನು ಶಾಶ್ವತವಾಗಿ ತಡೆಗಟ್ಟುವ ನಿಟ್ಟಿನಲ್ಲಿ ತ್ವರಿತ ಕ್ರಮ ವಹಿಸುವ ಬಗ್ಗೆ ಅರಣ್ಯ ಸಚಿವರು ಭರವಸೆ ನೀಡಿದರು.
ನನ್ನ ಸಂಪುಟ ಸಹೋದ್ಯೋಗಿ, ಕೇಂದ್ರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಶ್ರೀ @byadavbjp ಅವರನ್ನು ಭೇಟಿಯಾಗಿ ಅಂತರ ಸಚಿವಾಲಯ ಸಂಬಂಧಿತ ವಿಷಯಗಳು ಹಾಗೂ ಅಭಿವೃದ್ಧಿ ಕುರಿತಂತೆ ರಚನಾತ್ಮಕ ಚರ್ಚೆ ನಡೆಸಲಾಯಿತು.
ಬಹು ಮುಖ್ಯವಾಗಿ ಕರ್ನಾಟಕದಲ್ಲಿ ಮಾನವ- ವನ್ಯಜೀವಿ ಸಂಘರ್ಷ, ನಿರಂತರವಾಗಿ ನಡೆಯುತ್ತಿರುವ ಆನೆ ದಾಳಿಯನ್ನು… pic.twitter.com/jdDZ4QUoOQ
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) February 4, 2026








