ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಕಲಾಪದ ವೇಳೆ ಇಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಅವಾಚ್ಯ ಪದ ಬಳಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಸಿಟಿ ರವಿ ಅವರ ವಿರುದ್ಧ ದೂರು ನೀಡಿದ್ದರು. ಹೀಗಾಗಿ ಸಿಟಿ ರವಿ ಅವರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಇದಾದ ಬಳಿಕ ಸುವರ್ಣ ಸೌಧದಿಂದ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಘಟನೆಯಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಈ ಕುರಿದಂತೆ ನಾನು ನಾಳೆ ಮಾತನಾಡುತ್ತೇನೆ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕಣ್ಣೀರು ಹಾಕುತ್ತಲೇ ಭಾವುಕರಾಗಿ ಉತ್ತರಿಸಿದರು.