ಬೆಂಗಳೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ನಾನು ರಾಜಕಾರಣ ಮಾಡುವುದಕ್ಕೆ ಬಂದಿದ್ದೇನೆ ಅದಕ್ಕಾಗಿ ನಾನು ಕೆಲಸ ಮಾಡುತ್ತಿದ್ದೇನೆ ಈ ಬಗ್ಗೆ ಯಾವುದೇ ಪ್ರಶ್ನೆ ಬೇಡ ಎಂದು ತಿಳಿಸಿದರು.
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಮಾತನಾಡಿ ಪಕ್ಷದಿಂದ ಜಿಟಿ ದೇವೇಗೌಡ ದೂರ ಇದ್ದಾರೆ ಎಂಬ ವಿಚಾರವಾಗಿ ಶಾಸಕ ಜಿಟಿ ದೇವೇಗೌಡರ ಬಗ್ಗೆ ದೊಡ್ಡವರು ಮಾತನಾಡುತ್ತಾರೆ. ಪಕ್ಷದ ಹಿರಿಯರು, ವರಿಷ್ಠರು ಇದ್ದಾರೆ ಅವರೇ ಈ ಪ್ರಶ್ನೆಗೆ ಉತ್ತರ ಕೊಡುತ್ತಾರೆ ಎಂದರು.
ಇನ್ನು ಸಿನಿಮಾಗೆ ಗುಡ್ ಬೈ ಹೇಳಿರುವ ನಿಖಿಲ್ ಕುಮಾರಸ್ವಾಮಿ, ಮುಂದೆ ಮತ್ತೆ ಸಿನಿಮಾ ಮಾಡುತ್ತಾರೆ ಎಂಬ ಪ್ರಶ್ನೆಗೆ ಸಿನಿಮಾ ಟಿ ಆರ್ ಪಿ ಸದ್ಯ ಯಾವ ರೀತಿ ಕೊಡುತ್ತಿದೆ ಎಂದು ಗೊತ್ತಿದೆ. ರಾಜಕೀಯ ಕ್ಷೇತ್ರದಲ್ಲಿ ನಾನು ಹೆಚ್ಚಾಗಿ ಇರುತ್ತೇನೆ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದರು.








