ವಿಜಯಪುರ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಳಿಕ ಕೇಂದ್ರ ಬಿಜೆಪಿ ಶಿಸ್ತು ಸಮಿತಿಯು ಇದೀಗ ಶಾಸಕರಾದಂತಹ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದೆ. ವಿಜಯಪುರ ಶಾಸಕ ಯತ್ನಾಳ್ ಅವರು, ವಿಜಯಪುರದ ಬಿಜೆಪಿ ಅಭ್ಯರ್ಥಿಯಾಗಲು ಕೆಲವರು ಯತ್ನಿಸುತ್ತಿದ್ದಾರೆ. ಆದರೆ 2028ರ ವಿಧಾನಸಭಾ ಚುನಾವಣೆಗೆ ವಿಜಯಪುರದ ಬಿಜೆಪಿ ಅಭ್ಯರ್ಥಿ ನಾನೇ ಎಂದು ಭವಿಷ್ಯ ನುಡಿದಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಜಯಪುರ ಬಿಜೆಪಿ ಅಭ್ಯರ್ಥಿ ಆಗಲು ಕೆಲವರ ಯತ್ನ ನಡೆಯುತ್ತಿದೆ. ಈ ವಿಚಾರವಾಗಿ ಶಾಸಕ ಯತ್ನಾಳ ಕಿಡಿಕಾರಿದ್ದು, ಮುಂದಿನ ಚುನಾವಣೆಯಲ್ಲಿ ನಾನೇ ಬಿಜೆಪಿಯ ಅಭ್ಯರ್ಥಿ ಎಂದು ಶಾಸಕ ಬಸನಗೌಡ ಪಾಟೀಲ ಭವಿಷ್ಯ ನುಡಿದಿದ್ದಾರೆ. ನಾನೇ ಬಿಜೆಪಿಯ ಅಭ್ಯರ್ಥಿ, ಅವರಿಗೆ ಬಿಳಿ ಬಟ್ಟೆ ಬಿಚ್ಚಿಡಿ ಎಂದು ಹೇಳಿ. ಮೊದಲು ಜೀನ್ಸ್ ಪ್ಯಾಂಟ್ ಹಾಕಿಕೊಂಡು ಓಡಾಡುತ್ತಿದ್ದರು. ಈಗಲೂ ಜೀನ್ಸ್ ಪ್ಯಾಂಟ್ ಧರಿಸಿ ಓಡಾಡಿ ಎಂದು ಹೇಳಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರೋಕ್ಷವಾಗಿ ತಮ್ಮದೇ ಪಕ್ಷದವರಿಗೆ ತಿರುಗೇಟು ನೀಡಿದ್ದಾರೆ.