ಮಂಗಳೂರು : ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಗುಂಡೇಟಿನಿಂದ ಗಾಯಗೊಂಡು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ದೂರವಾಣಿ ಕರೆ ಮಾಡಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರೋಗ್ಯ ವಿಚಾರಿಸಿದರು ಎಂದು ಹೇಳಲಾಗಿತ್ತು. ಆದರೆ ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ನಾನು ರಿಕ್ಕಿ ರೈಗೆ ಕರೆ ಮಾಡಿ ಮಾತನಾಡಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ನಾನು ರಿಕ್ಕಿ ರೈಗೆ ಕರೆ ಮಾಡಿ ಮಾತನಾಡಿಯೇ ಇಲ್ಲ. ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡೋಕೆ ಹೇಳಿದ್ದೇನೆ. ಆರೋಪಿಗಳು ವಿರುದ್ಧ ಮುಲಾಜಿಲ್ಲದೆ ಕ್ರಮ ಆಗಲಿ ಎಂದು ಮಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.
ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು.ಈ ದಾಳಿಯಲ್ಲಿ ಗುಂಡು ತಗುಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಗಾಯಗೊಂಡಿದ್ದರು. ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹ ಅವರಿಗೆ ಕರೆ ಮಾಡಿದಂತ ಡಿಸಿಎಂ ಡಿಕೆ ಶಿವಕುಮಾರ್, ಆರೋಗ್ಯ ವಿಚಾರಿಸಿದರು ಎಂದು ಸುದ್ದಿ ಹರಿದಾಡಿತ್ತು. ಆದರೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.