ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ.
ಬೆಳಗ್ಗೆ 10 ಗಂಟೆಯಿಂದ ನಟ ದರ್ಶನ್ ಅವರನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರಿಗೆ ಮಹತ್ವದ ಮಾಹಿತಿಯನ್ನು ಹೇಳಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ ವೇಳೆ ನಾನು ಅಲ್ಲಿ ಇರಲಿಲ್ಲ. ನಾನು ಬುದ್ಧಿವಾದ ಹೇಳಿ ಹೋಗಿದ್ದೆ. ಆದರೆ ನನ್ನ ಜೊತೆಗಿದ್ದವರು ಹಲ್ಲೆ ಮಾಡಿದ್ದಾರೆ. ಆದರೆ ಪೊಲೀಸ್ ತನಿಖೆಯಲ್ಲಿ ದರ್ಶನ್ ಅಲ್ಲಿದ್ದರು ಎನ್ನಲಾಗಿದೆ
ದರ್ಶನ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವುದಾಗಿ ಬಂಧಿತ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ರೇಣುಕಾಸ್ವಾಮಿಗೆ ಚಿತ್ರದುರ್ಗದಿಂದ ಬೆಂಗಳೂರಿನ ಕಾಮಾಕ್ಷಿ ಪಾಳ್ಯಕ್ಕೆ ಕರೆಸಿಕೊಂಡು ನಟ ದರ್ಶನ್ ಸೇರಿ ಹಲವರು ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಮೂರಿಯಲ್ಲಿ ಎಸೆಯಲಾಗಿದೆ ಎಂದು ಹೇಳಲಾಗಿದೆ.
ಪವಿತ್ರಗೌಡನಿಗೆ ಆಶ್ಲೀಲ ಮೇಸೆಜ್ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ.