ಮೈಸೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಕುಟುಂಬ ಸಮೇತವಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಚಾಮುಂಡೇಶ್ವರಿ ತಾಯಿಯ ಬಳಿ ನನಗೆ ಏನು ಬೇಕು ಅದನ್ನು ನಾನು ಬೇಡಿಕೊಂಡಿದ್ದೇನೆ ಎಂದು ತಿಳಿಸಿದರು.
ಪ್ರಯತ್ನಕ್ಕಿಂತ ಪ್ರಾರ್ಥನೆ ಫಲ ಕೊಡುತ್ತೆ ಎಂಬುದು ನಮ್ಮ ನಂಬಿಕೆ. ಕುಟುಂಬಸ್ಥರ ಜೊತೆಗೆ ಬಂದು ಚಾಮುಂಡೇಶ್ವರಿಯ ದರ್ಶನ ಪಡೆದಿದ್ದೇನೆ. ರಾಜ್ಯಕ್ಕೆ ಒಳ್ಳೆದಾಗಲಿ ಎಂದು ದೇವಿಯ ಬಳಿ ಪ್ರಾರ್ಥನೆ ಮಾಡಿದ್ದೇನೆ. ನನಗೆ ಏನು ಬೇಕು ಅದನ್ನು ತಾಯಿಯ ಬಳಿ ಪ್ರಾರ್ಥನೆ ಮಾಡಿದ್ದೇನೆ. ಇಲ್ಲಿ ರಾಜಕೀಯ ಮಾತನಾಡುವುದಕ್ಕೆ ಬಂದಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ನಮಗೆ ಬುದ್ಧಿಮಾತು ಹೇಳಿದ್ದಾರೆ. ನಾವೆಲ್ಲರೂ ಒಟ್ಟಿಗೆ ಸೇರಿಕೊಂಡು ಕೆಲಸ ಮಾಡುತ್ತೇವೆ ಎಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.