ಹಾವೇರಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನವೆಂಬರ್ 6ರಂದು ವಿಚಾರಣೆಗೆ ಹಾಜರಾಗಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ನಾನು ಯಾವತ್ತೂ ಕಳಂಕವಾಗಿ ಕೆಲಸ ಮಾಡಿಲ್ಲ ನನ್ನ ಮೇಲೆ ಯಾವುದೇ ಕಪ್ಪು ಚುಕ್ಕೆ ಇಲ್ಲ ಎಂದು ತಿಳಿಸಿದರು.
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಗಾಪುರದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಭಾಷಣದಲ್ಲಿ ತಿಳಿಸಿದ ಅವರು, ಬಡವರಿಗೆ ನಾನು ಮಾಡಿದ ಕೆಲಸ ಸಹಿಸಿಕೊಳ್ಳಲಾಗದೆ ನನ್ನ ವಿರುದ್ಧ ಇಂತಹ ಆರೋಪ ಮಾಡಿದ್ದಾರೆ. ನನ್ನ ಹಾಗೂ ನನ್ನ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆರೋಪ ಮಾಡಿದರು.
ನಾನು ಯಾವತ್ತೂ ಕಳಂಕವಾಗಿ ಕೆಲಸ ಮಾಡಿಲ್ಲ. ನನ್ನ ಮೇಲೆ ಯಾವುದೇ ಕಪ್ಪು ಚುಕ್ಕೆ ಇಲ್ಲ. ತಪ್ಪು ಮಾಡದಿದ್ದರೂ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಎಲ್ಲೆಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿಗಳು ಇದ್ದಾರೋ ಅಲ್ಲಿ ಸುಳ್ಳು ಕೇಸ್ ಗಳನ್ನು ಹಾಕಿಸಿ ಕಿರುಕುಳ ನೀಡುತ್ತಿದ್ದಾರೆ. ಬಂಕಾಪುರವನ್ನು ತಾಲೂಕು ಮಾಡುತ್ತೇನೆ ಎಂದು ಬಸವರಾಜ್ ಬೊಮ್ಮಾಯಿ ಸುಳ್ಳು ಹೇಳಿದ್ದರು ನಾಲ್ಕು ಬಾರಿ ಬೊಮ್ಮಾಯಿ ಸುಳ್ಳು ಹೇಳಿದ್ರು ಈಗ ಮಗನನ್ನು ಎಲೆಕ್ಷನ್ ನಲ್ಲಿ ನಿಲ್ಲಿಸಿದ್ದಾರೆ ಎಂದು ಬಂಕಾಪುರದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.