ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ಜಾರಿ ನಿರ್ದೇಶನಾಲಯ (ED) ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಒಂದು ಪ್ರಕರಣದಲ್ಲಿ ನನಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ತಿಳಿಸಿದರು.
ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ಕೇಸ್ ನಲ್ಲಿ ಪತ್ನಿ ಪಾರ್ವತಿಗೆ ನೀಡಿದ್ದ ಸಮನ್ಸ್ ಗೆ ತಡೆ ನೀಡಿದೆ. ಲೋಕಾಯುಕ್ತತನಕ್ಕೆ ನಡೆಯುತ್ತಿರುವಾಗ ಯಾಕೆ ಇಷ್ಟು ಆತುರ ಎಂದಿದೆ. ಜಾರಿ ನಿರ್ದೇಶನಲಯದ ಸಂಬಂಧಿಸಿದೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನೀವು ಆತರ ಮಾಡುವುದರಲ್ಲಿ ಅರ್ಥವಿಲ್ಲವೆಂದು ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಸಿಬಿಐ ತನಿಖೆಗೆ ನೀಡಬೇಕೆ ಅಥವಾ ಬೇಡವೇ ಎಂದು ಚರ್ಚೆಯಾಗುತ್ತಿದೆ. ಹೈಕೋರ್ಟ್ ವಾದ ಪ್ರತಿವಾದವನ್ನು ಆಲಿಸಿ ತೀರ್ಪನ್ನು ಕಾಯ್ದಿರಿಸಿದೆ. ನನಗೆ ಈ ಒಂದು ಪ್ರಕರಣದಲ್ಲಿ ಯಾವುದೇ ಆತಂಕವಿಲ್ಲ ನ್ಯಾಯ ಸಿಗುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು.