ಮಂಡ್ಯ : ಅಕ್ರಮವಾಗಿ ಭೂ ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಕುರಿತು ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಮುಡಾ ಕೇಸ್ ನಲ್ಲಿ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಆಗ್ರಹಿಸಿ ಪ್ರತಿಭಟನೆ ಮಾಡಿದರು. ನಾವೇನು ಎಚ್ ಡಿ ಕುಮಾರಸ್ವಾಮಿ ಅವರಿಗೆ ರಾಜೀನಾಮೆ ಕೇಳಿದ್ದೀವ? ಈ ಹಿಂದೆ ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಲು ನಾನು ಸಹ ಕಾರಣನಾಗಿದ್ದೇನೆ ಎಂದು ತಿಳಿಸಿದರು.
ಮಂಡ್ಯದಲ್ಲಿ ಕೃಷಿ ಇಲಾಖೆ ಸಚಿವ ಎನ್. ಚೆಲುವರಾಯಸ್ವಾಮಿ ಮಾತನಾಡಿ, ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಜಮೀನು ತೆರವಾಗಿದೆ. ನಮ್ಮ ಹಿಂದೆ ಎಚ್ ಡಿ ಕುಮಾರಸ್ವಾಮಿ ಬಿದ್ದಿರುವುದು ಗೊತ್ತಾಗಿದೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಏನು ಮಾಡದಿದ್ದರೂ ಕೂಡ ಪಾದಯಾತ್ರೆ ನಡೆಸಿ ಬಿಜೆಪಿಯವರು ರಾಜೀನಾಮೆಗೆ ಪಟ್ಟು ಹಿಡಿದರು. ಆದರೆ ನಾವು ಕುಮಾರಸ್ವಾಮಿ ರಾಜೀನಾಮೆ ಬಗ್ಗೆ ಮಾತನಾಡಿದ್ದೇವಾ?
ನಾವೇನು ಹೆಚ್ ಡಿ ಕುಮಾರಸ್ವಾಮಿ ರಾಜೀನಾಮೆ ಕೇಳಿದ್ದೀವಾ?ಎಂದು ವಾಗ್ದಾಳಿ ನಡೆಸಿದರು. ಈ ಹಿಂದೆ HD ಕುಮಾರಸ್ವಾಮಿ ಸಿಎಂ ಆಗಲು ನಾನು ಕೂಡ ಕಾರಣನಾಗಿದ್ದೇನೆ. ಅವರ ಬಗ್ಗೆ ಎಂದು ಕೆಟ್ಟದಾಗಿ ಮಾತನಾಡಿಲ್ಲ ಇನ್ನಾದರೂ ಟೀಕೆ, ಟಿಪ್ಪಣಿ ಬಿಟ್ಟು ಒಳ್ಳೆಯ ಕೆಲಸ ಮಾಡಲಿ ಕೇಂದ್ರದಿಂದ ವಿಶೇಷ ಅನುದಾನ ತರಲಿ ನಾನೇ ಅವರಿಗೆ ಅಭಿನಂದಿಸುತ್ತೇನೆ ಎಂದು ಮಂಡ್ಯದಲ್ಲಿ ಕೃಷಿ ಇಲಾಖೆ ಸಚಿವ ಎನ್ ಚೆಲುವರಾಯ ಸ್ವಾಮಿ ಹೇಳಿಕೆ ನೀಡಿದರು.