ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ನಟ ದರ್ಶನ್ ಮಧ್ಯಂತರ ಜಾಮೀನು ಮಂಜೂರು ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಲಯದ ತೀರ್ಪು ಸ್ವಾಗತ ಮಾಡುತ್ತೇನೆ. ನಾನು ಕೋರ್ಟ್ ತೀರ್ಪನ್ನು ಪ್ರಶ್ನೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ನಟ ದರ್ಶನ್ ಬಿಡುಗಡೆ ವಿಷಯ ತಿಳಿಯುತ್ತಿದ್ದ ಬಳ್ಳಾರಿ ಜೈಲಿನ ಮುಂದೆ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಕಾದು ಕುಳಿತಿದ್ದಾರೆ.