ಉಡುಪಿ : ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ರಾಜೀನಾಮೆ ಕುರಿತಾಗಿ ನಮ್ಮ ಪಕ್ಷದಲ್ಲಿ ರಾಜಿನಾಮೆ ವಿಚಾರ ಬರುವುದಿಲ್ಲ. ಯಾವಾಗ ಬೇಕಾದರೂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಆಗಬಹುದು. ಆದರೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಆಗುವಾಗ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಉಡುಪಿಯಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಹೇಳಿಕೆ ನೀಡಿದರು.
ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನೊಬ್ಬ ಕಾರ್ಯಕರ್ತ ಪಕ್ಷ ನನಗೆ ಒಂದು ಜವಾಬ್ದಾರಿ ಕೊಟ್ಟಿತ್ತು. ಇನ್ನೊಂದು ಜವಾಬ್ದಾರಿ ಕೊಟ್ಟರು ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಕೆಲಸ ಮಾಡುವುದು ನನ್ನ ಕರ್ಮ ಏನೇ ಜವಾಬ್ದಾರಿ ಕೊಟ್ಟರೂ ಸಹ ನಾನು ನಿಭಾಯಿಸುತ್ತೇನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪಳನಿಸ್ವಾಮಿ ಭೇಟಿಯಾಗಿದ್ದಾರೆ. ಎಐಎಡಿಎಂಕೆ ಜೊತೆಗಿನ ಮೈತ್ರಿ ಬಗ್ಗೆ ಅಮಿತ್ ಶಾ ಮಾತನಾಡಿದ್ದಾರೆ. ಕೇಂದ್ರ ಗೃಹ ಸಚಿವರನ್ನು ಭೇಟಿ ಆಗಿರುವುದರಿಂದ ಸಂದೇಶ ಸ್ಪಷ್ಟವಾಗಿದೆ.
ನಾನು ಪೊಸಿಷನ್ನಲ್ಲಿ ಇರಬೇಕು ಅನ್ನೋದು ಪಕ್ಷಕ್ಕೆ ಗೊತ್ತಿದೆ. ಮೈತ್ರಿಗೆ ಯಾವುದು ಸರಿಯಾದ ನಿಲುವು ಎಂಬುವುದು ಪಕ್ಷಕ್ಕೆ ಗೊತ್ತು. ಕಾರ್ಯಕರ್ತರಾಗಿ ನಾನು ಪಕ್ಷದ ನಿರ್ಧಾರಕ್ಕೆ ಒಪ್ಪಿಗೆ ಕೊಡಬೇಕು. ಪಕ್ಷ ಏನೇ ತೀರ್ಮಾನ ತೆಗೆದುಕೊಂಡರು ನಾನೊಬ್ಬ ಪಕ್ಷದ ಕಾರ್ಯಕರ್ತ. ತಮಿಳುನಾಡಿನಲ್ಲಿ ಒಂದಲ್ಲ ಒಂದು ದಿನ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಬಹಳ ವರ್ಷದಿಂದ ನಾವು ತಾಳ್ಮೆಯಿಂದ ಕಾದಿದ್ದೇವೆ ಕಾಯುತ್ತೇವೆ. ಇನ್ನು 20 30 ವರ್ಷ ಬೇಕಾದರೂ ಆಗಲಿ ಅಧಿಕಾರಕ್ಕೆ ಬರುತ್ತೇವೆ. ದೀರ್ಘಕಾಲಿನ ದೃಷ್ಟಿಕೋನದಿಂದ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜಕೀಯದಲ್ಲಿ ಅಧಿಕಾರದಿಂದ ತಾಳ್ಮೆ ಬಹಳ ಮುಖ್ಯ ಎಂದು ಕೆ ಅಣ್ಣಾಮಲೈ ತಿಳಿಸಿದರು.