ಬೆಂಗಳೂರು : ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ, ಬೆಂಗಳೂರಿನಲ್ಲಿ ನಡೆದಿದೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ವಿವೇಕ್ ಇದೀಗ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಮೂರು ದಿನಗಳ ಹಿಂದೆ ನೇಣು ಬಿಗಿದುಕೊಂಡು ವಿವೇಕ್ ಆತ್ಮಹತ್ಯೆಗೆ ಯತ್ನಿಸಿದ್ದರು. ಐಸಿಐಸಿಐ ಬ್ಯಾಂಕ್ ನಲ್ಲಿ ವಿವೇಕ್ ಲೋನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಮೃತ ವಿವೇಕ್ ಪತ್ನಿಯಿಂದ ಇದೀಗ ತಲಘಟ್ಟಪುರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಎರಡು ಮೂರು ದಿನದಿಂದ ವಿವೇಕ್ ಡಲ್ ಆಗಿದ್ದರು. ಆದರೆ ಇದಕ್ಕೆ ಕಾರಣ ತಿಳಿದು ಬಂದಿಲ್ಲ ಸಾವಿರ ನಿಖರ ಕಾರಣ ಪತ್ತೆ ಮಾಡುವಂತೆ ವಿವೇಕ್ ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮನೆಯಲ್ಲಿ ಯಾವುದೇ ಡೆತ್ ನೋಟ್ ಸಹ ಪತ್ತೆಯಾಗಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ವಿವೇಕ್ ಮೃತದೇಹ ಹಸ್ತಾಂತರಿಸಲಾಗಿದೆ.