Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸಾರ್ವಜನಿಕರೇ ಎಚ್ಚರ : ಅಪ್ಪಿತಪ್ಪಿಯೂ ಹೊಸ ವರ್ಷಕ್ಕೆ ಅಪರಿಚಿತರು ಕಳುಹಿಸುವ `APK’ ಲಿಂಕ್ ಕ್ಲಿಕ್ ಮಾಡಬೇಡಿ.!

20/12/2025 6:13 AM

ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನಾಳೆ ಈ ಮಾರ್ಗದಲ್ಲಿ ರೈಲು 1 ಗಂಟೆ ತಡವಾಗಿ ಸಂಚಾರ ಆರಂಭ

20/12/2025 6:10 AM

ALERT : ವಿದ್ಯಾರ್ಥಿಗಳೇ ಎಚ್ಚರ : ಕರ್ನಾಟಕ ಸೇರಿ ದೇಶದ ಈ ’3 ವಿಶ್ವವಿದ್ಯಾಲಯಗಳು ನಕಲಿ’ | Fake Universities

20/12/2025 6:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಅಂಬೇಡ್ಕರ್ ಹುಟ್ಟದೇ ಇರುತ್ತಿದ್ದರೆ ನಾನು ಕುರಿ ಮೇಯಿಸಿಕೊಂಡು ಇರಬೇಕಾಗುತ್ತಿತ್ತು’ : ಕೇಂದ್ರ ಸಚಿವ ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಬಹಿರಂಗ ಪತ್ರ.!
KARNATAKA

BIG NEWS : `ಅಂಬೇಡ್ಕರ್ ಹುಟ್ಟದೇ ಇರುತ್ತಿದ್ದರೆ ನಾನು ಕುರಿ ಮೇಯಿಸಿಕೊಂಡು ಇರಬೇಕಾಗುತ್ತಿತ್ತು’ : ಕೇಂದ್ರ ಸಚಿವ ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಬಹಿರಂಗ ಪತ್ರ.!

By kannadanewsnow5718/12/2024 12:05 PM

ಬೆಂಗಳೂರು : ಅಂಬೇಡ್ಕರ್ ಎಂಬ ಮನುಷ್ಯ ಈ ಭೂಮಿಯಲ್ಲಿ ಹುಟ್ಟದೆ ಇರುತ್ತಿದ್ದರೆ, ನನಗೆ ಮುಖ್ಯಮಂತ್ರಿಯಾಗುವ ಅವಕಾಶವೇ ಬರುತ್ತಿರಲಿಲ್ಲ, ನಾನು ಊರಲ್ಲಿ ದನ-ಕುರಿ ಮೇಯಿಸಿಕೊಂಡು ಇರಬೇಕಾಗುತ್ತಿತ್ತು ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೊಂದು ಬಹಿರಂಗ ಪತ್ರ ಬರೆದಿದ್ದಾರೆ.

ಸಿಎಂ ಸಿದ್ದರಾಮಯ್ಯ ಬರೆದ ಪತ್ರದಲ್ಲಿ ಏನಿದೆ?

ಸನ್ಮಾನ್ಯ ಅಮಿತ್ ಶಾ ಅವರೇ,
ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷದ ಅಂತರಂಗದ ಅಭಿಪ್ರಾಯವನ್ನು ಬಹಿರಂಗವಾಗಿ ಧೈರ್ಯದಿಂದ ದೇಶದ ಮುಂದೆ ತೆರೆದಿಟ್ಟದ್ದಕ್ಕಾಗಿ ಮತ್ತು ಕೊನೆಗೂ ನಿಮ್ಮ ಜೀವಮಾನದಲ್ಲಿ ಒಂದು ಸತ್ಯವನ್ನಾದರೂ ಹೇಳಿದ್ದಕ್ಕೆ ನಿಮ್ಮನ್ನು ಅಭಿನಂದಿಸುತ್ತೇನೆ. ನಿಮ್ಮ ಮಾತಿನಿಂದ ನಮಗೆ ಆಶ್ಚರ್ಯವಾಗಿಲ್ಲ, ನಮಗೆ ಇದು ಗೊತ್ತಿತ್ತು. ಸಂಸತ್ ನಲ್ಲಿ (18-12-2024) ಆಡಿದ ನಿಮ್ಮ ಮಾತಿನಿಂದ ಇಡೀ ದೇಶಕ್ಕೆ ನಿಮ್ಮ ಅಂತರಂಗದ ಅರಿವಾಗಿದೆ.. ಬಾಬಾಸಾಹೇಬ್ ಅವರು ಕೊಟ್ಟ ಸಂವಿಧಾನದಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿರುವ ಸಂಸತ್ ನಲ್ಲಿ ನಿಂತು ಅವರ ಸ್ಮರಣೆಯನ್ನು ವ್ಯಸನ ಎಂದು ತುಚ್ಛೀಕರಿಸುವ ನಿಮ್ಮ ಧಾಷ್ಟ್ರಕ್ಕೆ ಶಹಭಾಸ್ ಅನ್ನಲೇಬೇಕು..
ಅಮಿತ್ ಶಹಾ ಅವರೇ, ‘’ಬಾಬಾಸಾಹೇಬರ ಬಗ್ಗೆ ತಮಗೆ ಅಪಾರ ಅಭಿಮಾನ ಇದೆ, ಗೌರವ ಇದೆ, ನನ್ನ ಮಾತುಗಳನ್ನು ತಿರುಚಲಾಗಿದೆ’’ ಎಂದೆಲ್ಲ ಸ್ಪಷ್ಟೀಕರಣ ಕೊಟ್ಟು ಆತ್ಮವಂಚನೆ ಮಾಡಿಕೊಳ್ಳಬೇಡಿ. ಅದನ್ನು ಸಮರ್ಥಿಸಿಕೊಂಡು ದೇಶವನ್ನು ಎದುರಿಸಿ.

ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ. ನಮ್ಮ ಉಸಿರು ಇರುವವರೆಗೆ, ಈ ಭೂಮಿಯಲ್ಲಿ ಸೂರ್ಯ-ಚಂದ್ರ ಇರುವವರೆಗೆ ಅಂಬೇಡ್ಕರ್ ಸ್ಮರಣೆ ಇರಲಿದೆ. ನೀವು ತುಚ್ಛೀಕರಿಸಿದಷ್ಟೂ ಪುಟಿದು ಪುಟಿದು ಮೇಲೆದ್ದು ಬಂದು ಅವರು ನಮ್ಮ ಮುನ್ನಡೆಯ ಹಾದಿಗೆ ಬೆಳಕಾಗುತ್ತಾರೆ. ನಿಮ್ಮ ದುರಹಂಕಾರದ ಮಾತಿಗೆ ನಿಮ್ಮ ಬೆನ್ನಹಿಂದಿರುವ ಚೇಲಾಗಳು ಮೇಜುಕುಟ್ಟಿ ಸಂಭ್ರಮಿಸಿರಬಹುದು. ಆದರೆ ಅಂಬೇಡ್ಕರ್ ಅವರಿಂದಾಗಿ ಸಮಾನತೆ ಮತ್ತು ಘನತೆಯ ಬದುಕನ್ನು ಪಡೆದಿರುವ ದೇಶದ ಕೋಟ್ಯಂತರ ಜನ ನಿಮಗೆ ಛೀಮಾರಿ ಹಾಕುತ್ತಿದ್ದಾರೆ ಎನ್ನುವುದು ತಿಳಿದಿರಲಿ.

ಅಂಬೇಡ್ಕರ್ ಎಂಬ ಮನುಷ್ಯ ಈ ಭೂಮಿಯಲ್ಲಿ ಹುಟ್ಟದೆ ಇರುತ್ತಿದ್ದರೆ, ನನಗೆ ಮುಖ್ಯಮಂತ್ರಿಯಾಗುವ ಅವಕಾಶವೇ ಬರುತ್ತಿರಲಿಲ್ಲ, ನಾನು ಊರಲ್ಲಿ ದನ-ಕುರಿ ಮೇಯಿಸಿಕೊಂಡು ಇರಬೇಕಾಗುತ್ತಿತ್ತು.. ನಮ್ಮ ಪಕ್ಷದ ಹಿರಿಯ ನಾಯಕರಾದ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆಯವರು ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನಗಳನ್ನು ಪಡೆದು ಎಐಸಿಸಿಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿರಲಿಲ್ಲ, ಕಲಬುರ್ಗಿಯ ಯಾವುದಾದರೂ ಕಾರ್ಖಾನೆಯಲ್ಲಿ ಕಾರ್ಮಿಕರಾಗಿರುತ್ತಿದ್ದರು. ಈ ವಾಸ್ತವ ಸದಾ ನಮ್ಮ ನೆನಪಲ್ಲಿರುತ್ತದೆ. ನೀವು ಹೇಳುವ ವ್ಯಸನ ನಮ್ಮ ಪಾಲಿನ ಅಂಬೇಡ್ಕರ್ ಸ್ಮರಣೆ, ನಮ್ಮನ್ನೆಲ್ಲ ಇಲ್ಲಿಗೆ ತಂದು ನಿಲ್ಲಿಸಿ ನಮಗೆ ಸ್ಥಾನಮಾನ, ಗೌರವ ಮತ್ತು ಜನರ ಸೇವೆ ಮಾಡುವ ಅವಕಾಶವನ್ನು ಕೊಟ್ಟಿದೆ ಎನ್ನುವುದನ್ನು ನಾವು ಮರೆತಿಲ್ಲ.

ನಾನು ಮಾತ್ರ ಅಲ್ಲ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಕೊಟ್ಟಿರುವ ಸಂವಿಧಾನ ಇಲ್ಲದೆ ಇರುತ್ತಿದ್ದರೆ ನೀವು ಕೂಡಾ ಗೃಹಸಚಿವರಾಗಿ ಬದುಕು ಕೊಟ್ಟ ಮಹಾತ್ಮನನ್ನೇ ತುಚ್ಛೀಕರಿಸುವ ಅವಕಾಶ ನಿಮಗೆ ಸಿಗುತ್ತಿರಲಿಲ್ಲ. ನೀವು ನಿಮ್ಮೂರಿನಲ್ಲಿ ಎಲ್ಲಾದರೂ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗುತ್ತಿತ್ತು, ದೇಶದ ಪ್ರಧಾನಿ ಮತ್ತು ನಿಮ್ಮ ಸಹದ್ಯೋಗಿ ನರೇಂದ್ರ ಮೋದಿ ಅವರು ಕೂಡಾ ರೈಲ್ವೇ ಸ್ಟೇಷನ್ ನಲ್ಲಿ ಚಹಾ ಮಾರಿಕೊಂಡೇ ಇರಬೇಕಾಗಿತ್ತೋ ಏನೋ? ಅವರಿಗೂ ಪ್ರಧಾನಿಯಾಗುವ ಅವಕಾಶವೇ ಸಿಗುತ್ತಿರಲಿಲ್ಲ. ಇದನ್ನು ಪ್ರಧಾನಿಯವರೂ ಒಪ್ಪಿಕೊಳ‍್ಳಬಹುದು ಎಂದು ನಂಬಿದ್ದೇನೆ, ನೀವೂ ಒಪ್ಪಿಕೊಂಡು ಬಿಡಿ.

ಅಮಿತ ಶಾ ಅವರೇ, ಇತಿಹಾಸವನ್ನು ಓದಿರುವ ನಮ್ಮಂತಹವರಿಗೆ ನಿಮ್ಮೊಳಗಿನ ಅಂಬೇಡ್ಕರ್ ದ್ವೇಷ ಹೊಸದಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಬರೆದಿರುವ ದೇಶದ ಸಂವಿಧಾನವನ್ನು ಅವರು ಬದುಕಿರುವಾಗಲೇ ನಿಮ್ಮ ಮಾತೃಸಂಸ್ಥೆಯಾದ ಆರ್ ಎಸ್ ಎಸ್ ಯಾಕೆ ತಿರಸ್ಕರಿಸಿತ್ತು? ಆರ್ ಎಸ್ ಎಸ್ ನಾಯಕರಾಗಿದ್ದ ಹೆಡಗೆವಾರ್, ಗೋಲ್ವಾಲ್ಕರ್ ಮತ್ತು ಸಾವರ್ಕರ್ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆಗಳೇನು ಎನ್ನುವ ವಿವರಗಳೆಲ್ಲ ಇತಿಹಾಸದ ಪುಟಗಳಲ್ಲಿ ಇವೆ. ನಿಮ್ಮ ಸುಳ್ಳುಗಳು ಮತ್ತು ಆತ್ಮವಂಚನೆಯ ನಡವಳಿಕೆಗಳಿಂದ ಅದನ್ನು ಮರೆಮಾಚಬಹುದು, ಆದರೆ ಅಳಿಸಿಹಾಕಲಾಗುವುದಿಲ್ಲ ಎನ್ನುವುದು ನೆನಪಿರಲಿ. ಆ ಅಭಿಪ್ರಾಯವನ್ನೇ ನೀವು ಸಂಸತ್ ನಲ್ಲಿ ಆಡಿದ್ದೀರಿ.

ನಿಮ್ಮ ಮಾತಿನ ಧಾಟಿಯಲ್ಲಿಯೇ ಪ್ರತಿಕ್ರಿಯಿಸುತ್ತೇನೆ. ನಿಮ್ಮ ಪಕ್ಷ ಮತ್ತು ಅದರ ಹಿಂದಿರುವ ಪರಿವಾರಕ್ಕೆ ಇತ್ತೀಚೆಗೆ ಮೋದಿ…ಮೋದಿ.. ಮೋದಿ ಎಂದು ಹೇಳುವುದು ಒಂದು ವ್ಯಸನ ಆಗಿದೆ. ಮೋದಿಯವರ ಬದಲಿಗೆ ಅಷ್ಟು ಬಾರಿ ದೇವರ ನಾಮ ಸ್ಮರಣೆ ಮಾಡಿದ್ದರೆ ಏಳು ಜನ್ಮದಲ್ಲಿ ಮಾತ್ರ ಅಲ್ಲ, ನೂರು ಜನ್ಮದಲ್ಲಿಯೂ ನಿಮಗೆ ಸ್ವರ್ಗವೇ ಸಿಗುತ್ತಿತ್ತು, ಕೇವಲ ಅಧಿಕಾರದಲ್ಲಿ ಉಳಿಯಲಿಕ್ಕಾಗಿ ಮಾಡಿರುವ ಪಾಪಕೃತ್ಯಗಳಿಗೆ ಕ್ಷಮೆಯೂ ಸಿಗುತ್ತಿತ್ತು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

"ಕೇಂದ್ರ ಗೃಹ ಸಚಿವರಾದ @AmitShah ಅವರಿಗೊಂದು ಬಹಿರಂಗ ಪತ್ರ"

ಸನ್ಮಾನ್ಯ ಅಮಿತ್ ಶಾ ಅವರೇ,
ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷದ ಅಂತರಂಗದ ಅಭಿಪ್ರಾಯವನ್ನು ಬಹಿರಂಗವಾಗಿ ಧೈರ್ಯದಿಂದ ದೇಶದ ಮುಂದೆ ತೆರೆದಿಟ್ಟದ್ದಕ್ಕಾಗಿ ಮತ್ತು ಕೊನೆಗೂ ನಿಮ್ಮ ಜೀವಮಾನದಲ್ಲಿ ಒಂದು ಸತ್ಯವನ್ನಾದರೂ ಹೇಳಿದ್ದಕ್ಕೆ… pic.twitter.com/JepgN2dbjx

— Siddaramaiah (@siddaramaiah) December 18, 2024

BIG NEWS : `ಅಂಬೇಡ್ಕರ್ ಹುಟ್ಟದೇ ಇರುತ್ತಿದ್ದರೆ ನಾನು ಕುರಿ ಮೇಯಿಸಿಕೊಂಡು ಇರಬೇಕಾಗುತ್ತಿತ್ತು' : ಕೇಂದ್ರ ಸಚಿವ ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಬಹಿರಂಗ ಪತ್ರ.! BIG NEWS: ``If Ambedkar had not been born I would have been tending sheep'': CM Siddaramaiah's open letter to Union Minister Amit Shah
Share. Facebook Twitter LinkedIn WhatsApp Email

Related Posts

ALERT : ಸಾರ್ವಜನಿಕರೇ ಎಚ್ಚರ : ಅಪ್ಪಿತಪ್ಪಿಯೂ ಹೊಸ ವರ್ಷಕ್ಕೆ ಅಪರಿಚಿತರು ಕಳುಹಿಸುವ `APK’ ಲಿಂಕ್ ಕ್ಲಿಕ್ ಮಾಡಬೇಡಿ.!

20/12/2025 6:13 AM1 Min Read

ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನಾಳೆ ಈ ಮಾರ್ಗದಲ್ಲಿ ರೈಲು 1 ಗಂಟೆ ತಡವಾಗಿ ಸಂಚಾರ ಆರಂಭ

20/12/2025 6:10 AM1 Min Read

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ: ಸಭ್ಯ ಉಡುಗೆ, ನಗದು ಘೋಷಣೆ, ಚಲನವಲನ ವಹಿ ನಿರ್ವಹಣೆ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

20/12/2025 6:00 AM2 Mins Read
Recent News

ALERT : ಸಾರ್ವಜನಿಕರೇ ಎಚ್ಚರ : ಅಪ್ಪಿತಪ್ಪಿಯೂ ಹೊಸ ವರ್ಷಕ್ಕೆ ಅಪರಿಚಿತರು ಕಳುಹಿಸುವ `APK’ ಲಿಂಕ್ ಕ್ಲಿಕ್ ಮಾಡಬೇಡಿ.!

20/12/2025 6:13 AM

ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನಾಳೆ ಈ ಮಾರ್ಗದಲ್ಲಿ ರೈಲು 1 ಗಂಟೆ ತಡವಾಗಿ ಸಂಚಾರ ಆರಂಭ

20/12/2025 6:10 AM

ALERT : ವಿದ್ಯಾರ್ಥಿಗಳೇ ಎಚ್ಚರ : ಕರ್ನಾಟಕ ಸೇರಿ ದೇಶದ ಈ ’3 ವಿಶ್ವವಿದ್ಯಾಲಯಗಳು ನಕಲಿ’ | Fake Universities

20/12/2025 6:09 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ: ಸಭ್ಯ ಉಡುಗೆ, ನಗದು ಘೋಷಣೆ, ಚಲನವಲನ ವಹಿ ನಿರ್ವಹಣೆ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

20/12/2025 6:00 AM
State News
KARNATAKA

ALERT : ಸಾರ್ವಜನಿಕರೇ ಎಚ್ಚರ : ಅಪ್ಪಿತಪ್ಪಿಯೂ ಹೊಸ ವರ್ಷಕ್ಕೆ ಅಪರಿಚಿತರು ಕಳುಹಿಸುವ `APK’ ಲಿಂಕ್ ಕ್ಲಿಕ್ ಮಾಡಬೇಡಿ.!

By kannadanewsnow5720/12/2025 6:13 AM KARNATAKA 1 Min Read

ಬೆಂಗಳೂರು : ಸಾರ್ವಜನಿಕರೇ ಎಚ್ಚರ, ಹೊಸ ವರ್ಷಕ್ಕೆ ನಿಮ್ಮ ವಾಟ್ಸಪ್ ಗೆ ಅಪರಿಚಿತರು ಕಳುಹಿಸುವ `APK’ ಶುಭಾಶಯ ಲಿಂಕ್‌ಗಳ ಮೇಲೆ…

ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನಾಳೆ ಈ ಮಾರ್ಗದಲ್ಲಿ ರೈಲು 1 ಗಂಟೆ ತಡವಾಗಿ ಸಂಚಾರ ಆರಂಭ

20/12/2025 6:10 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ: ಸಭ್ಯ ಉಡುಗೆ, ನಗದು ಘೋಷಣೆ, ಚಲನವಲನ ವಹಿ ನಿರ್ವಹಣೆ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

20/12/2025 6:00 AM

ರಾಜ್ಯದಲ್ಲಿ `BPL’ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ: ಸಚಿವ ಕೆ.ಹೆಚ್ ಮುನಿಯಪ್ಪ

20/12/2025 5:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.