ಹುಬ್ಬಳ್ಳಿ : ರಾಜ್ಯದಲ್ಲಿ ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಪೂರ್ಣವಧಿ ನಾನೇ ಸಿಎಂ ಆಗಿರುತ್ತೇನೆ. ಎಂದು ಹೇಳಿಕೆ ನೀಡುತ್ತಿದ್ದರೆ, ಇನ್ನೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿತ ಶಾಸಕರು ಡಿಸೆಂಬರ್ ನಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಇದೀಗ ನಾನು ಸಿಎಂ ಆಗೋಕೆ ಗುರು ಬಲ, ತಾರಾ ಬಲ ಬೇಕು, ಜೊತೆಗೆ ಶನಿಕಾಟ ಕಡಿಮೆ ಆಗ್ಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮತನಾಡಿದ ಅವರು, ನಾನು ಸಿಎಂ ಆಗಲು ಗುರುಬಲ, ತಾರಾ ಬಲ ಕೂಡಬೇಕು. ಶನಿಕಾಟ ಕಡಿಮೆಯಾಗಬೇಕು. ಒಬ್ಬೊಬ್ಬರಿಗೆ ಒಂದೊಂದು ರೀತಿ ಸಮಸ್ಯೆ ಇವೆ. ನನಗೆ ಶನಿಕಾಟ ಇದೆ.ಸಿಎಂ ದೆಹಲಿ ಭೇಟಿ ವಿಚಾರವಾಗಿ, ಯಾವುದೇ ನಿಗಮ ಮಂಡಳಿ ನೇಮಕ ಪೈನಲ್ ಮಾಡುವುದಾದರೂ ರಾಹುಲ್ ಗಾಂಧಿಯವರಿಗೆ ಹೇಳಿ ಮಾಡ್ತಾರೆ. ವಾರಕ್ಕೊಮ್ಮೆ ದೆಹಲಿಗೆ ಹೋದರೂ ಕಡಿಮೆ. ನಿಗಮ ಮಂಡಳಿ ಚರ್ಚೆಗೆ ಹೋಗಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಇನ್ನೂ ನಿಗದಿಯಾಗಿಲ್ಲ ಎಂದಿದ್ದಾರೆ.
ರಾಜ್ಯಾಧ್ಯಕ್ಷ ಬದಲಾವಣೆ ಅಜೆರ್ಂಟ್ ಇಲ್ಲ. ನಮ್ಮ ಅಭಿಪ್ರಾಯ ನಾವು ಹೇಳಿರಬಹುದು. ಆದರೆ ಯಾವುದು ಸೂಕ್ತ ಎಂದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಎರಡು ಹುದ್ದೆ ಇವೆ, ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಅಧ್ಯಕ್ಷರಾಗಲು ಸಾಕಷ್ಟು ಜನ ಆಕಾಂಕ್ಷಿಗಳು ಇದ್ದಾರೆ. ಯತೀಂದ್ರ ಹೇಳಿಕೆ ವಿಚಾರವಾಗಿ, ಮಹಾರಾಜರು ಸಮಾಜ ಸುಧಾರಕರು. ಸಿದ್ದರಾಮಯ್ಯ ಕೂಡಾ ಸಮಾಜ ಸುಧಾರಕರು. ಕಳೆದ ಮೂವತ್ತು ವರ್ಷದಲ್ಲಿ ಸಿದ್ದರಾಮಯ್ಯ ಅನೇಕ ಕೆಲಸ ಮಾಡಿದ್ದಾರೆ. ಆ ಹಿನ್ನೆಲೆಯಲ್ಲಿ ಹೋಲಿಕೆ ಮಾಡಿರಬಹುದು. ಅವರ ವ್ಯಕ್ತಿತ್ವ ಅವರಿಗೆ ಇರುತ್ತೆ. ಇವರ ವ್ಯಕ್ತಿತ್ವ ಇವರಿಗೆ ಇರುತ್ತದೆ. ಇದನ್ನು ದೊಡ್ಡದು ಮಾಡುವ ಅಗತ್ಯ ಇಲ್ಲ ಎಂದಿದ್ದಾರೆ.