ಬೆಂಗಳೂರು : ನನ್ನ ಅಣ್ಣನ ಹಣೆಬರಹದಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ. ಪಕ್ಷ ತಾಳ್ಮೆಯಿಂದ ಇರಿ ಎಂದು ಹೇಳಿದೆ. ಸೂಕ್ತ ಸಂದರ್ಭದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಅಂದಿದ್ದಾರೆ. ಮೈಸೂರಿಗೆ ಕಾಂಗ್ರೆಸ್ ನಾಯಕ ರಾಹುಲ್ ಬಂದಿದ್ದಾಗ ಹೇಳಿದ್ದಾರೆ. ಪಕ್ಷದ ಆದೇಶಕ್ಕಾಗಿ ಡಿಕೆ ಶಿವಕುಮಾರ್ ಕಾಯುತ್ತಿದ್ದಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷ ಹಾಗೂ ಶಾಸಕರು ಹಿತದೃಷ್ಟಿಯಿಂದ ಕಾಯುತ್ತಿದ್ದೇವೆ. ಅಧಿಕಾರ ಯಾರಿಗೂ ಅಷ್ಟು ಸುಲಭವಾಗಿ ಬರುವುದಿಲ್ಲ. ಕುರ್ಚಿಯನ್ನು ಯಾರು ಅಷ್ಟೊಂದು ಸುಲಭವಾಗಿ ಬಿಡಲ್ಲ. ಗ್ರಾಮ ಪಂಚಾಯತಿ ಅಧ್ಯಕ್ಷರೇ ಕುರ್ಚಿಯನ್ನು ಸುಲಭವಾಗಿ ಬಿಡಲ್ಲ. ಎಂದಮೇಲೆ ಸಿಎಂ ಕುರ್ಚಿ ಅಷ್ಟು ಸುಲಭವಾಗಿ ಬಿಡಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದರು.








