Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

09/02/2026 8:27 PM

ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ವೇಳೆ ಕಳ್ಳಾಟ: 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ

09/02/2026 8:23 PM

ಲಾರಿ-ಬೈಕ್ ನಡುವೆ ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು

09/02/2026 8:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಬಾಲಗರ್ಭಿಣಿ ಕೇಸ್ ನಿರ್ಲಕ್ಷಿಸಿದರೆ `PDO, ರೆವಿನ್ಯೂ ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಕೇಸ್ : CM ಸಿದ್ದರಾಮಯ್ಯ ಎಚ್ಚರಿಕೆ
KARNATAKA

BIG NEWS : ರಾಜ್ಯದಲ್ಲಿ ಬಾಲಗರ್ಭಿಣಿ ಕೇಸ್ ನಿರ್ಲಕ್ಷಿಸಿದರೆ `PDO, ರೆವಿನ್ಯೂ ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಕೇಸ್ : CM ಸಿದ್ದರಾಮಯ್ಯ ಎಚ್ಚರಿಕೆ

By kannadanewsnow5701/06/2025 6:03 AM

ಬೆಂಗಳೂರು : ಹಿಂದುಳಿದವರು, ದಲಿತರು, ಅಶಿಕ್ಷಿತರು ಇರುವ ಕಡೆ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳು ಇರುತ್ತವೆ. ಇದನ್ನು ಸಮರ್ಪಕವಾಗಿ ತಡೆಯಬೇಕು ಎಂದು ನಿಮಗೆ ಅನ್ನಿಸಲ್ವಾ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಡಿಸಿ, ಎಸ್ಪಿ ಮತ್ತು ಸಿಇಒಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು, ರಾಜ್ಯದಲ್ಲಿ ಬಾಲ್ಯ ವಿವಾಹ, ಬಾಲಗರ್ಭಿಣಿ ಪ್ರಕರಣ ತಡಿಬೇಕು, ಸರಿಯಾಗಿ ನಿಗಾ ವಹಿಸಿ, ವರದಿ ನೀಡದ PDO ಗಳು ರೆವಿನ್ಯೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಿ. ಅಗತ್ಯ ಇರುವ ಕಡೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ಕಾನೂನು ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚಿಸಿದರು.

ಯುವನಿಧಿ ಫಲಾನುಭವಿ ನಿರುದ್ಯೋಗಿಗಳಿಗೆ ಉದ್ಯೋಗ, ತರಬೇತಿ ಸಿಗಬೇಕು. ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ತರಬೇತಿ ನೀಡಿ, ಉದ್ಯೋಗ ಕೈಗೆ ಸಿಗುವಂತಾಗಬೇಕು. ತರಬೇತಿ ಪಡೆದವರೆಲ್ಲರಿಗೂ ಉದ್ಯೋಗ ಸಿಗದೇ ಹೋಗಬಹುದು. ಆದರೆ ತರಬೇತಿ ಮಾತ್ರ ಹೆಚ್ಚೆಚ್ಚು ನಿರುದ್ಯೋಗಿ ಮತ್ತು ಯುವನಿಧಿ ಫಲಾನುಭವಿಗಳಿಗೆ ನೀಡಬೇಕು ಎಂದು ಸಿಎಂ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು ನಿಯಮಿತವಾಗಿ ಡೈರಿ ಬರೆಯುವ ಅಭ್ಯಾಸ ಮಾಡಿಕೊಳ್ಳಬೇಕು, ಆ ಡೈರಿಯಲ್ಲಿ ಫೀಲ್ಡ್‌ ವರ್ಕ್‌ ಅನುಭವಗಳು, ಸಮಸ್ಯೆಗಳು, ಪರಿಹಾರ ಎಲ್ಲದರ ಬಗ್ಗೆಯೂ ಉಲ್ಲೇಖವಿರಬೇಕು ಎಂದು ಕಳೆದ ವರ್ಷದ ಸಭೆಯಲ್ಲಿ ಮತ್ತು ಎಲ್ಲಾ ಕೆಡಿಪಿ ಸಭೆಗಳಲ್ಲಿ ನಾನು ಸೂಚನೆ ನೀಡಿದ್ದೆ. ಇನ್ನೂ ಕೆಲವರು ಸಮರ್ಪವಾಗಿ ಡೈರಿಗಳನ್ನು ಬರೆದಿಲ್ಲ ಎನ್ನುವ ಮಾಹಿತಿ ಇದೆ. ನೀವು ಬರೆದ ಡೈರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬಂದರೆ ನಾನೂ ಗಮನಿಸಬಹುದು ಎಂದು ಸೂಚನೆ ನೀಡಿದರು.

ಕುರಿಗಾಹಿಗಳ ಮೇಲೆ ಅರಣ್ಯ ಇಲಾಖೆಯವರು ಅವೈಜ್ಞಾನಿಕವಾಗಿ ಕೇಸು ದಾಖಲಿಸುವುದು ಮತ್ತು ಅನಗತ್ಯ ತೊಂದರೆ ಕೊಡುವ ಬಗ್ಗೆ ವರದಿಗಳು, ದೂರುಗಳು ಬಂದಿವೆ. ಇದನ್ನು ನಿಲ್ಲಿಸಬೇಕು. ಕುರಿಗಳು ತಲೆ ಎತ್ತಿ ಮೇಯುವುದಿಲ್ಲ. ಅವು ತಲೆ ಬಗ್ಗಿಸಿಕೊಂಡು ಮೇಯುವುದರಿಂದ ಅರಣ್ಯ ಸಿಬ್ಬಂದಿಯ ತಪ್ಪು ಗ್ರಹಿಕೆಯಿಂದ ಕುರಿಗಾಹಿಗಳಿಗೆ ತೊಂದರೆ ಆಗುತ್ತಿದೆ ಇದನ್ನು ತಪ್ಪಿಸಿ ಎಂದರು.

ನೀವೆಲ್ಲಾ ಯುವ ಜಿಲ್ಲಾಧಿಕಾರಿಗಳಿದ್ದೀರಿ. ನಿಮಗೆ ಫೀಲ್ಡ್‌ ಎಕ್ಸ್‌ಪೀರಿಯನ್ಸ್‌ ಚನ್ನಾಗಿ ಇರುತ್ತದೆ. ನೀವು ಕೆಲಸ ಮಾಡುವ ಜಿಲ್ಲೆಗಳಲ್ಲಿ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗುವ ದಿಕ್ಕಿನಲ್ಲಿ ಇನ್ನೋವೇಟೀವ್‌ ಆಗಿ ಕೆಲಸ ಮಾಡಿ ತೋರಿಸಿ. ನಿಮ್ಮ ಹೆಸರು  ಜಿಲ್ಲೆಗಳಲ್ಲಿ, ರಾಜ್ಯದಲ್ಲಿ ಅಚ್ಚಳಿಯದೆ ಉಳಿಯುವ ರೀತಿಯಲ್ಲಿ ದಾಖಲೆ ಮಾಡಿ ತೋರಿಸಿ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಹುರಿದುಂಬಿಸಿದರು.

ಕುರಿಗಾಹಿಗಳಿಗೆ ಕುರಿಗಳ ಮತ್ತು ತಮ್ಮ ಜೀವದ ರಕ್ಷಣೆಗೆ ಬಂದೂಕು ಪರವಾನಗಿ ಕೊಡಬೇಕು ಎಂದು ಸೂಚಿಸಿದ್ದೆ. ಇದಿನ್ನೂ ಕೆಲವು ಕಡೆ ಜಾರಿಗೆ ಬಂದಿಲ್ಲ. ಕುರಿಗಳ್ಳರು ಕುರಿಗಳನ್ನು ಕದಿಯುವ ಜೊತೆಗೆ, ಕುರಿಗಾಹಿಗಳನ್ನು ಕೊಲೆ ಮಾಡಿರುವ ಘಟನೆಗಳೂ ಕೂಡ ನಡೆದಿವೆ. ಹೀಗಾಗಿ ಬಂದೂಕು ಪರವಾನಗಿ ಕೊಡುವುದನ್ನು ಸಮರ್ಪಗೊಳಿಸಬೇಕು ಎನ್ನುವ ಸೂಚನೆ ನೀಡಿದರು. ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು, ಕುರಿಗಾಹಿಗಳಿಗೆ ಬಂದೂಕು ನೀಡುವ ಕಾರ್ಯದ ಬಗ್ಗೆ ನಿಗಾ ಇಡಲು ಹಿರಿಯ ಅಧಿಕಾರಿಯೊಬ್ಬರನ್ನು ನಿಯೋಜಿಸುವುದಾಗಿ ತಿಳಿಸಿದರು.

a criminal case will be filed against the PDO BIG NEWS: If the case of a child-pregnant woman is ignored in the state revenue staff: CM Siddaramaiah warns
Share. Facebook Twitter LinkedIn WhatsApp Email

Related Posts

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

09/02/2026 8:27 PM4 Mins Read

ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ವೇಳೆ ಕಳ್ಳಾಟ: 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ

09/02/2026 8:23 PM1 Min Read

ಲಾರಿ-ಬೈಕ್ ನಡುವೆ ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು

09/02/2026 8:15 PM1 Min Read
Recent News

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

09/02/2026 8:27 PM

ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ವೇಳೆ ಕಳ್ಳಾಟ: 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ

09/02/2026 8:23 PM

ಲಾರಿ-ಬೈಕ್ ನಡುವೆ ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು

09/02/2026 8:15 PM

BREAKING: ವಿಧಾನಸೌಧದ ಮುಂದೆಯೇ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಬ್ಯಾನರ್ ಅಳವಡಿಕೆ: FIR ದಾಖಲು

09/02/2026 8:10 PM
State News
KARNATAKA

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

By kannadanewsnow0909/02/2026 8:27 PM KARNATAKA 4 Mins Read

ಬೆಂಗಳೂರು : “ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿಯುವ ನಿರ್ಧಾರವನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರ ಕಳುಹಿಸಿರುವ…

ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ವೇಳೆ ಕಳ್ಳಾಟ: 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ

09/02/2026 8:23 PM

ಲಾರಿ-ಬೈಕ್ ನಡುವೆ ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು

09/02/2026 8:15 PM

BREAKING: ವಿಧಾನಸೌಧದ ಮುಂದೆಯೇ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಬ್ಯಾನರ್ ಅಳವಡಿಕೆ: FIR ದಾಖಲು

09/02/2026 8:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.