Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ `ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ’ ನೇಮಕಾತಿ ನಿಯಮಕ್ಕೆ ತಿದ್ದುಪಡಿ : ಈ ಶಿಕ್ಷಕರಿಗೆ ಸಿಗಲಿದೆ ಬಡ್ತಿ ಭಾಗ್ಯ!

28/02/2026 5:02 AM

ರಾಜ್ಯಾದ್ಯಂತ ಇಂದಿನಿಂದ `ದ್ವಿತೀಯ ಪಿಯುಸಿ ಪರೀಕ್ಷೆ’ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

28/02/2026 4:55 AM

ಮಹಿಳೆಯರೇ ಎಚ್ಚರ ; ಈ 6 ಆಹಾರಗಳು ನಿಮ್ಮ ಗರ್ಭಕೋಶ ದುರ್ಬಲಗೊಳಿಸ್ಬೋದು.! ತಕ್ಷಣ ಕಡಿಮೆ ಮಾಡಿ

27/02/2026 10:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಪೋಷಕರ ಆದಾಯ ನಿಗದಿತ ಮಿತಿ ದಾಟಿದ್ದರೆ ಅಭ್ಯರ್ಥಿಯು ಸರ್ಕಾರಿ ನೇಮಕಾತಿಯಲ್ಲಿ ಮೀಸಲಾತಿ ಪಡೆಯಲು ಅನರ್ಹ: ಹೈಕೋರ್ಟ್ ಮಹತ್ವದ ತೀರ್ಪು
KARNATAKA

BIG NEWS: ಪೋಷಕರ ಆದಾಯ ನಿಗದಿತ ಮಿತಿ ದಾಟಿದ್ದರೆ ಅಭ್ಯರ್ಥಿಯು ಸರ್ಕಾರಿ ನೇಮಕಾತಿಯಲ್ಲಿ ಮೀಸಲಾತಿ ಪಡೆಯಲು ಅನರ್ಹ: ಹೈಕೋರ್ಟ್ ಮಹತ್ವದ ತೀರ್ಪು

By kannadanewsnow5706/12/2025 8:08 AM

ಬೆಂಗಳೂರು: ಸರ್ಕಾರಿ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯ ಪೋಷಕರ ವಾರ್ಷಿಕ ಆದಾಯ ನಿಗದಿತ ಮಿತಿ ದಾಟಿದ್ದರೆ ಅಂತಹ ಅಭ್ಯರ್ಥಿ ಕೆನೆ ಪದರಕ್ಕೆ ಸೇರಲಿದ್ದು, ಮೀಸಲಾತಿ ಪಡೆಯಲು ಅನರ್ಹ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಕೆಪಿಟಿಸಿಎಲ್ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಧಾರವಾಡದ ರಾಘವೇಂದ್ರ ಚಂದ್ರಣ್ಣನವರ್ ಪ್ರವರ್ಗ 2ಎ ಅಡಿ ಆಯ್ಕೆಯಾಗಿದ್ದರು. ಅದರಂತೆ ಮೀಸಲಾತಿ ಪತ್ರಕ್ಕಾಗಿ ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನಾ ಸಮಿತಿಗೆ ಅರ್ಜಿ ಸಲ್ಲಿಸಿದ್ದರು. ಅಭ್ಯರ್ಥಿಯ ಪೋಷಕರ ಆದಾಯವು ಪ್ರವರ್ಗ 2ಎ ಗೆ ನಿಗದಿಪಡಿಸಿದ ವಾರ್ಷಿಕ ಆದಾಯ ಮಿತಿ 8 ಲಕ್ಷ ಮೀರಿದ ಕಾರಣ ಹಿಂದುಳಿದ ವರ್ಗದಡಿ ಮೀಸಲಾತಿ ಪಡೆಯಲು ಅರ್ಹರಲ್ಲ ಎಂದು ಸಮಿತಿ ಆದೇಶಿಸಿತ್ತು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಾತಿ, ಆದಾಯ ಪರಿಶೀಲನಾ ಮೇಲ್ಮನವಿ ಪ್ರಾಧಿಕಾರ, ಧಾರವಾಡ ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನಾ ಸಮಿತಿ ಅಧ್ಯಕ್ಷರು ಸಲ್ಲಿಸಿದ್ದ ರಿಟ್ ಮೇಲ್ಮನವಿ, ನ್ಯಾಯಾಂಗ ನಿಂದನಾ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗಿಯ ಪೀಠ ಮಹತ್ವದ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ರಾಘವೇಂದ್ರ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಏಕಸದಸ್ಯ ನ್ಯಾಯ ಪೀಠ 2024ರ ಅಕ್ಟೋಬರ್ ನಲ್ಲಿ ಅಭ್ಯರ್ಥಿ ಮೀಸಲಾತಿ ಸೌಲಭ್ಯ ಪಡೆಯಲು ಅರ್ಹ ಎಂದು ತೀರ್ಪು ನೀಡಿತ್ತು.

ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಸರ್ಕಾರ ವಿಭಾಗೀಯ ನ್ಯಾಯಪೀಠದಲ್ಲಿ ಪ್ರಶ್ನಿಸಿತ್ತು. ಸರ್ಕಾರದ ಪರ ವಾದ ಮಂಡಿಸಿದ ನಮಿತಾ ಮಹೇಶ್ ಅವರ ವಾದವನ್ನು ನ್ಯಾಯಪೀಠ ಮನ್ನಿಸಿದೆ. ಅಭ್ಯರ್ಥಿಯ ಪೋಷಕರ ವೇತನವೂ ಸೇರಿದಂತೆ ಎಲ್ಲಾ ಮೂಲಗಳ ಆದಾಯವನ್ನು ಪರಿಗಣಿಸಬೇಕು. ಒಂದು ವೇಳೆ ಆದಾಯ ನಿಗದಿತ ಮಿತಿ ದಾಟಿದಲ್ಲಿ ಆದಾಯ ತೆರಿಗೆ ಪಾವತಿದಾರ ಆಗಿದ್ದರೆ ಆತನಿಗೆ ಕೆನೆ ಪದರ ನಿಯಮ ಅನ್ವಯವಾಗುತ್ತದೆ. ಅಭ್ಯರ್ಥಿ ಮೀಸಲಾತಿ ಕ್ಷೇಮು ಮಾಡಲು ಅವಕಾಶವಿಲ್ಲ ಎಂದು ವಿಭಾಗೀಯ ಪೀಠ ಹೇಳಿದೆ. ಈ ಪ್ರಕರಣದಲ್ಲಿ ಅಭ್ಯರ್ಥಿ ರಾಘವೇಂದ್ರ ಚಂದಣ್ಣನವರ್‌ ಅವರ ಪೋಷಕರ ವಾರ್ಷಿಕ ಆದಾಯವು ಹಿಂದುಳಿದ ವರ್ಗಗಳ 2ಎ ಪ್ರವರ್ಗದವರಿಗೆ ನಿಗದಿಪಡಿಸಿರುವ 8 ಲಕ್ಷಕ್ಕಿಂತ ಹೆಚ್ಚಿದೆ. ಮೇಲಾಗಿ ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ. ಅದರಂತೆ ಅಭ್ಯರ್ಥಿ ಮೀಸಲಾತಿ ಸೌಲಭ್ಯ ಕ್ಷೇಮು ಮಾಡಲಾಗದು ಎಂದು ಹೈಕೋರ್ಟ್ ತಿಳಿಸಿದೆ.

BIG NEWS: If the parents' income exceeds the prescribed limit the candidate is ineligible for reservation in government recruitment: High Court's important verdict
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ `ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ’ ನೇಮಕಾತಿ ನಿಯಮಕ್ಕೆ ತಿದ್ದುಪಡಿ : ಈ ಶಿಕ್ಷಕರಿಗೆ ಸಿಗಲಿದೆ ಬಡ್ತಿ ಭಾಗ್ಯ!

28/02/2026 5:02 AM1 Min Read

ರಾಜ್ಯಾದ್ಯಂತ ಇಂದಿನಿಂದ `ದ್ವಿತೀಯ ಪಿಯುಸಿ ಪರೀಕ್ಷೆ’ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

28/02/2026 4:55 AM2 Mins Read

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಮೈಸೂರು ವಿಭಾಗದ ಭಾಗಶಃ ರದ್ದಾಗಿದ್ದ ಈ ರೈಲು ಸಂಚಾರ ಪುನರಾರಂಭ

27/02/2026 9:13 PM1 Min Read
Recent News

ರಾಜ್ಯ ಸರ್ಕಾರದಿಂದ `ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ’ ನೇಮಕಾತಿ ನಿಯಮಕ್ಕೆ ತಿದ್ದುಪಡಿ : ಈ ಶಿಕ್ಷಕರಿಗೆ ಸಿಗಲಿದೆ ಬಡ್ತಿ ಭಾಗ್ಯ!

28/02/2026 5:02 AM

ರಾಜ್ಯಾದ್ಯಂತ ಇಂದಿನಿಂದ `ದ್ವಿತೀಯ ಪಿಯುಸಿ ಪರೀಕ್ಷೆ’ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

28/02/2026 4:55 AM

ಮಹಿಳೆಯರೇ ಎಚ್ಚರ ; ಈ 6 ಆಹಾರಗಳು ನಿಮ್ಮ ಗರ್ಭಕೋಶ ದುರ್ಬಲಗೊಳಿಸ್ಬೋದು.! ತಕ್ಷಣ ಕಡಿಮೆ ಮಾಡಿ

27/02/2026 10:04 PM

BIGG NEWS : ‘ತಕ್ಷಣ ಪುಸ್ತಕ ಹಿಂತಿರುಗಿಸಿ’, ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಕುರಿತ 8ನೇ ತರಗತಿ ಪುಸ್ತಕ ಹಿಂತೆಗೆದುಕೊಂಡ ‘NCERT’

27/02/2026 9:50 PM
State News
KARNATAKA

ರಾಜ್ಯ ಸರ್ಕಾರದಿಂದ `ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ’ ನೇಮಕಾತಿ ನಿಯಮಕ್ಕೆ ತಿದ್ದುಪಡಿ : ಈ ಶಿಕ್ಷಕರಿಗೆ ಸಿಗಲಿದೆ ಬಡ್ತಿ ಭಾಗ್ಯ!

By kannadanewsnow5728/02/2026 5:02 AM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರವು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ನೇಮಕಾತಿಗೆ ಸಂಬಂಧಿಸಿದಂತೆ ಮಹತ್ವದ ತಿದ್ದುಪಡಿಯನ್ನು ತಂದಿದ್ದು, ಹೊಸ ನಿಯಮಗಳನ್ನು ಅಧಿಕೃತವಾಗಿ ಪ್ರಕಟಿಸಿದೆ.…

ರಾಜ್ಯಾದ್ಯಂತ ಇಂದಿನಿಂದ `ದ್ವಿತೀಯ ಪಿಯುಸಿ ಪರೀಕ್ಷೆ’ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

28/02/2026 4:55 AM

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಮೈಸೂರು ವಿಭಾಗದ ಭಾಗಶಃ ರದ್ದಾಗಿದ್ದ ಈ ರೈಲು ಸಂಚಾರ ಪುನರಾರಂಭ

27/02/2026 9:13 PM

ಜನಗಣತಿ ವೇಳೆ ಕೆಲ ಶಿಕ್ಷಕರಿಗೆ ವಿನಾಯ್ತಿ ನೀಡಿ: ಸಾಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಎಸಿಗೆ ಮನವಿ

27/02/2026 8:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.