ಹಾವೇರಿ : ಇದೇ ನವೆಂಬರ್ 13ರಂದು ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, ಈಗಾಗಲೇ ಎಲ್ಲಾ ರಾಜಕೀಯ ನಾಯಕರು ತಮ್ಮ ಪಕ್ಷಗಳ ಪರವಾಗಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ.ಇಂದು ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಅವರ ಪರವಾಗಿ ಮತಯಾಚಿಸಿದರು.
ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದ ಹುಲಗೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅಂದರೆ ಭ್ರಷ್ಟಾಚಾರ ಜನತಾ ಪಾರ್ಟಿ. ಕೋವಿಡ್ ವೇಳೆ ಹೆಣಗಳಿಂದಲೂ ಹಣ ಲೂಟಿ ಮಾಡಿದ್ದಾರೆ. ಕರ್ನಾಟಕ ಇತಿಹಾಸದಲ್ಲಿ ಇದೆ ಮೊದಲು. ಹೆಣಗಳ ಮೇಲೆ ಹಣ ಮಾಡಿರುವ ಸಿಎಂ ಇದ್ದರೆ ಅದು ಬಸವರಾಜ ಬೊಮ್ಮಾಯಿ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು.
ಹೆಣಗಳ ಮೇಲೂ ಹಣ ಮಾಡಿದವರ ಮಗ ಗೆಲ್ಲಬೇಕಾ? ಯಾಸಿರ್ ಪಠಣ ಗೆಲ್ಲಬೇಕಾ? ನೀವೇ ನಿರ್ಧಾರ ಮಾಡಿ. 160 ಬರವಸೆಗಳ ಪೈಕಿ 158 ಭರವಸೆ ಈಡೇರಿಸಿದ್ದೇವೆ. 5 ಗ್ಯಾರಂಟಿ ಯೋಜನೆಗಳನ್ನು ಸಹ ಜಾರಿ ಮಾಡಿದ್ದೇವೆ. ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ ಅಂತ ಪ್ರಧಾನ ಮಂತ್ರಿಗಳು ಹೇಳಿದ್ದರು. ಗ್ಯಾರಂಟಿ ಜಾರಿಯಾದರೆ ರಾಜ್ಯ ದಿವಾಳಿ ಆಗುತ್ತೆ ಎಂದು ಹೇಳಿದ್ದರು. ಅಧಿಕಾರ ವಹಿಸಿಕೊಂಡ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ.
2018ರಲ್ಲಿ ಬಿಜೆಪಿಯವರು 600 ಭರವಸೆಗಳನ್ನು ನೀಡಿದ್ದರು. ಭರವಸೆಯ ಪೈಕಿ ಶೇಕಡ 10ರಷ್ಟು ಕೂಡ ಬಿಜೆಪಿ ಈಡೇರಿಸಲಿಲ್ಲ. ರೈತರ ಸಾಲವನ್ನು ಮನ್ನಾ ಮಾಡುತ್ತೇವೆ ಎಂದು ಬಿಜೆಪಿಯವರು ಹೇಳಿದರು.ಆದರೆ ಬಿಜೆಪಿಯವರು ರೈತರ ಸಾಲ ಮನ್ನಾ ಮಾಡಿದ್ರಾ? ಸಾಲ ಮನ್ನಾ ಮಾಡಲು ನೋಟ್ ಪ್ರಿಂಟ್ ಮಷೀನ್ ಇಲ್ಲ ಎಂದಿದ್ದರು ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.